ಮೈಸೂರು : ಬಿಜೆಪಿ ಯುವ ಮೋರ್ಚಾ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವತಿಯಿಂದ ಮಾಜಿ ಪ್ರಧಾನಿ, ಅಜಾತಶತ್ರು, ಶ್ರೀ ಅಟಲ್ ಬಿಹಾರಿ ವಾಜಪೇಯಿ ರವರ ಜನ್ಮದಿನ ರಂಗವಾಗಿ ಕೆಸರೆ ರಾಜೇಂದ್ರ ನಗರದಲ್ಲಿರುವ ಕೆಇಬಿ ಚೌಲ್ಟ್ರಿಯಲ್ಲಿ ಮಕ್ಕಳಿಗೆ, ಹಾಗೂ ಯುವಕರಿಗೆ, ಚಿತ್ರಕಲಾ ಸ್ಪರ್ಧೆ ಮತ್ತು ದೇಶಭಕ್ತಿ ಗೀತೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೆಇಬಿ ಚೌಲ್ಟ್ರಿಯಲ್ಲಿ 550ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿ ಚಿತ್ರಕಲಾ ಸ್ಪರ್ಧೆಯಲ್ಲಿ ಮೂರು ವಿಭಾಗಗಳು ಪ್ರಥಮ ದ್ವಿತೀಯ ತೃತೀಯ ಹಾಗೂ ದೇಶಭಕ್ತಿ ಗೀತೆ ಕಾರ್ಯಕ್ರಮಗಳಲ್ಲಿ ಮೂರು ವಿಭಾಗಗಳು ಒಳಗೊಂಡಂತೆ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ಪಡೆದು ಭಾಗವಹಿಸಿದ ಪ್ರತಿಯೊಬ್ಬರು ಪ್ರಮಾಣ ಪತ್ರವನ್ನು ಸ್ವೀಕರಿಸಿದರು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಮಹಾಪೌರರಾದ ಶ್ರೀ ಸಂದೇಶ ಸ್ವಾಮಿರವರು ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರು ಅಜಾತಶತ್ರು, ತಮ್ಮ ರಾಜಕೀಯ ಚಿಂತನೆಗಳಿಗೆ ಕಟಿಬದ್ಧರಾದವರು. ಅಕ್ಟೋಬರ್ 13, 1999ರಲ್ಲಿ, ಹೊಸ ಸಮ್ಮಿಶ್ರ ಸರ್ಕಾರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಮುಖ್ಯಸ್ಥರಾಗಿ ಎರಡನೇ ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. 1996ರಲ್ಲಿ ಇವರು ಅಲ್ಪಾವಧಿಗೆ ಪ್ರಧಾನಮಂತ್ರಿಯಾಗಿದ್ದರು. ಪಂಡಿತ್ ಜವಾಹರ್ ಲಾಲ್ ನೆಹರು ಅವರ ನಂತರ ಭಾರತದ ಪ್ರಧಾನಮಂತ್ರಿಯಾಗಿ ಸತತ ಎರಡು ಬಾರಿ ಸೇವೆ ಸಲ್ಲಿಸಿದ ಪ್ರಥಮ ಪ್ರಧಾನಮಂತ್ರಿ ಎಂಬ ಹೆಗ್ಗಳಿಗೆ ಇವರು ಪಾತ್ರರಾಗಿದ್ದಾರೆ.
ಹಿರಿಯ ಸಂಸದೀಯ ಪಟುವಿನ ರಾಜಕೀಯ ಬದುಕು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವಿಸ್ತರಿಸಿದೆ. ಶ್ರೀ ವಾಜಪೇಯಿ ಅವರು ಲೋಕಸಭೆಗೆ ಒಂಭತ್ತು ಬಾರಿ ಹಾಗೂ ರಾಜ್ಯಸಭೆಗೆ ಎರಡು ಬಾರಿ ಆಯ್ಕೆಯಾಗಿರುವುದು ಒಂದು ದಾಖಲೆಯೇ.
ಭಾರತದ ಪ್ರಧಾನಮಂತ್ರಿಯಾಗಿ, ವಿದೇಶಾಂಗ ಸಚಿವರಾಗಿ, ಸಂಸತ್ತಿನ ವಿವಿಧ ಮುಖ್ಯ ಸ್ಥಾಯಿ ಸಮಿತಿಗಳ ಅಧ್ಯಕ್ಷರಾಗಿ ಹಾಗೂ ವಿರೋಧಪಕ್ಷದ ನಾಯಕರಾಗಿ ಅವರು ಭಾರತದ ಸ್ವಾತಂತ್ರ್ಯ ನಂತರ ದೇಶೀಯ ಮತ್ತು ವಿದೇಶಿ ನೀತಿಗಳಿಗೆ ಸ್ಪಷ್ಟ ರೂಪ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದರು.
ನಂತರ ಮಾತನಾಡಿದ ಮಾಜಿ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷರಾದ ಶ್ರೀ ಬಿಪಿ ಮಂಜುನಾಥ್ ರವರು ಶ್ರೀ ಅಟಲ್ ಬಿಹಾರಿ ವಾಜಪೇಯಿ ರವರು ಮಹಾನ್ ರಾಷ್ಟ್ರಭಕ್ತರಾಗಿದ್ದರು ಇವರು ಮಾಡುವ ಪ್ರತಿಯೊಂದು ಕೆಲಸಗಳು ತೆಗೆದುಕೊಳ್ಳುವ ನಿರ್ಧಾರಗಳು ತಮ್ಮ ರಾಷ್ಟ್ರದ ಒಳಿತಿಗಾಗಿ ಹಗಲಿರಳು ಶ್ರಮಿಸುತ್ತಿದ್ದರು ಇವರ
ಜನುಮದಿನದ ಪ್ರಯುಕ್ತ ಇಂದು ಲೋಹಿತ್ ರವರ ಅಧ್ಯಕ್ಷತೆಯಲ್ಲಿ ರಾಷ್ಟ್ರಭಕ್ತರ ಚಿತ್ರಕಲಾ ಮತ್ತು ದೇಶಭಕ್ತಿ ಗೀತೆ ಆಯೋಜಿಸಿರುವುದು ನಿಜಕ್ಕೂ ಸಾಗಣಿಯ ಮತ್ತು ಪ್ರತಿಯೊಬ್ಬರಿಗೂ ದೇಶಭಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಇಂತಹ ಕೆಲಸಗಳು ಎಲ್ಲಾ ಭಾಗಗಳಲ್ಲೂ ಸಹ ಆಗಬೇಕು ವಿವಿಧ ಪಕ್ಷಗಳಲ್ಲಿ ಸೀರೆ ಹಾಗೂ ಇನ್ನಿತರ ಪದಾರ್ಥಗಳನ್ನು ಹಂಚಿ ಜನ ಸೇರಿಸುತ್ತಾರೆ ಆದರೆ ಬಿಜೆಪಿ ನರಸಿಂಹರಾಜ ಯುವ ಮೋರ್ಚಾ ತಂಡವು ರಾಷ್ಟ್ರಪ್ರೇಮ ಸ್ಪರ್ಧೆಯ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡುತ್ತಿದ್ದಂತೆ 500ಕ್ಕೂ ಹೆಚ್ಚು ಸ್ಪರ್ಧಿಗಳು ಬಂದಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಸ್ಪರ್ಧೆಯಲ್ಲಿ ಗೆಲ್ಲುವುದು ಒಂದು ಭಾಗವಾದರೆ ಸ್ಪರ್ಧಿಸುವುದು ಗೆದ್ದಂತೆಯೇ ಇಂತಹ ಕಾರ್ಯಕ್ರಮಗಳು ಸಾರ್ವಜನಿಕರ ಬಳಿ ಹತ್ತಿರ ತೆಗೆದುಕೊಂಡು ಜಾಗೃತಿ ಮೂಡಿಸಿ ಅವರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸಗಳು ಹೀಗೆ ಸಾಗಲಿ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮೈಸೂರು ನಗರ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಂಜೆ ಕಿರಣ್ ಗೌಡ, ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಡಿ ಲೋಹಿತ್, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ ಅನಿಲ್ ಥಾಮಸ್, ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಕುಮಾರ್, ಭರತ್,ನಗರ ಕಾರ್ಯಕಾರಣಿ ಸದಸ್ಯರಾದ ಕೃಷ್ಣಮೂರ್ತಿ ರಾವತ್, ಶಿವಾನಂದ್ ರಾವ್, ಕ್ಷೇತ್ರದ ಕಾರ್ಯದರ್ಶಿ ಸುಬ್ರಮಣ್ಯ, ನಗರ ಕಾರ್ಯದರ್ಶಿ ಮಹದೇವ ಪ್ರಸಾದ್, ನಗರ ಯುವ ಮೋರ್ಚಾ ಉಪಾಧ್ಯಕ್ಷರಾದ ಕಾರ್ತಿಕ್ ಮರಿಯಪ್ಪ, ಹಾಗೂ ನಿಶಾಂತ್, ಕಾರ್ಯದರ್ಶಿ ಪುನೀತ್, ಹಿಂದುಳಿದ ವರ್ಗಗಳ ಮೋರ್ಚಾ ನಗರ ಕಾರ್ಯದರ್ಶಿ ಮಹದೇವ್, ಕ್ಷೇತ್ರದ ಮುಖಂಡರಾದ ಪರಮೇಶ್ವರಯ್ಯ, ಕ್ಷೇತ್ರದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಧನರಾಜ್, ಹಾಗು ನವಿನ್ ಶೆಟ್ಟಿ, ಕಾರ್ಯದರ್ಶಿಗಳಾದ ಮನೋಜ್, ಅರುಣ್, ಹಾಗೂ ಪದಾಧಿಕಾರಿಗಳಾದ ರಂಜು, ಧನುಷ್, ವೇದಮೂರ್ತಿ, ಹಾಗೂ ಸ್ಪರ್ಧೆಯ ತೀರ್ಪುಗಾರರಾದ ಲಯನ್ಸ್ ಜೀವದಾರ ರಕ್ತ ನಿಧಿ ಕೇಂದ್ರದ ವಿದ್ಯಾ ಅನಿತಾ ಮೇಘನಾ ಮುಂತಾದವರು ಉಪಸ್ಥಿತರಿದ್ದರು.














