Coastal Bulletin

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ ಪ್ರಯುಕ್ತ ಬಿಜೆಪಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ತಂಡದವರು ಗಾಯತ್ರಿಪುರಂನಲ್ಲಿರುವ ತ್ರಿವೇಣಿ ಬೇಕರಿ ಎದುರು ಸಾರ್ವಜನಿಕರಿಗೆ ಸಿಹಿ ಹಂಚುವ ಮುಖಾಂತರ ಸಂಭ್ರಮಾಚರಣೆ ಮಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮಹಾಪೌರರಾದ ಶ್ರೀ ಸಂದೇಶ ಸ್ವಾಮಿ ರವರು ಈ ಚುನಾವಣೆ  ಕರ್ನಾಟಕದಲ್ಲಿ  ನಡೆಯುವ ಮುಂದಿನ ವಿಧಾನಸಭೆ

ಚುನಾವಣೆಗೆ ದಿಕ್ಸೂಚಿಯಾಗಲಿದೆ. ಕರ್ನಾಟಕದಲ್ಲಿ ಮುಂದಿನ ಬಾರಿಯೂ ಬಿಜೆಪಿ ಗೆದ್ದು ಅಧಿಕಾರ ಚುಕ್ಕಾಣಿ ಹಿಡಿಯಲು ಸದಾ ಸಿದ್ಧ ಎಂದು ತಿಳಿಸಿದರು.

Leave a Comment