Coastal Bulletin

ಬೆಂಗಳೂರು: ಇಂದಿನಿಂದ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಮಾ.28 ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ.

ಮಹಾರಾಷ್ಟ್ರದ ಮಧ್ಯ ಕರಾವಳಿ ಭಾಗದಲ್ಲಿ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಕಾರಣ ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ,

ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. 

ಬಂಗಾಲ ಕೊಲ್ಲಿಯಲ್ಲಿ ತೂಫಾನ್ ಎದ್ದಿರುವುದರಿಂದ ಮುಂದಿನ ಮೂರು ದಿನ  ಮೀನುಗಾರರು ಸಮುದ್ರಕ್ಕೆ ಹೋಗದಂತೆ ತಿಳಿಸಲಾಗಿದೆ.

Leave a Comment