ಕರ್ನಾಟಕದಲ್ಲಿ ಮೊದಲ ಹಂತದ ಮತದಾನ: 14 ಕ್ಷೇತ್ರಗಳಲ್ಲಿ ಶೇಕಡಾ 65 ರಷ್ಟು ಮತದಾನ.

Coastal Bulletin
ಕರ್ನಾಟಕದಲ್ಲಿ ಮೊದಲ ಹಂತದ ಮತದಾನ: 14 ಕ್ಷೇತ್ರಗಳಲ್ಲಿ ಶೇಕಡಾ 65 ರಷ್ಟು ಮತದಾನ.

ಬೆಂಗಳೂರು: ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಬೆಳಗ್ಗೆ ಏಳು ಗಂಟೆಗೆ ಆರಂಭಗೊಂಡ ಮತದಾನ ಪಕ್ರಿಯೆ ಸಂಜೆ 6 ಗಂಟೆಗೆ ಸರಿಯಾಗಿ ಅಂತ್ಯಗೊಂಡಿದೆ.

ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸ ಮಾಡಿರುವುದು ಬಿಟ್ಟರೆ ಇನ್ನುಳಿದಂತೆ ಸಣ್ಣ-ಪುಟ್ಟ ಗಲಾಟೆಯೊಂದಿಗೆ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ಅಂತ್ಯವಾಗಿದೆ. ಇಂದು ನಡೆದ 14 ಕ್ಷೇತ್ರಗಳಲ್ಲಿ  ಮಂಡ್ಯದಲ್ಲಿ ಜಿಲ್ಲೆಯಲ್ಲಿ  ಗರಿಷ್ಠ ಮತದಾನವಾಗಿದೆ.

ಸಿಲಿಕಾನ್ ಸಿಟಿ, ಐಟಿ ಬಿಟಿ ಕಂಪನಿಗಳ ನೆಲೆ. ವಿದ್ಯಾವಂತರೇ ತುಂಬಿರೋ ಮಯಾನಗರಿ ಬೆಂಗಳೂರು.ಆದ್ರೆ, ಬೆಂಗಳೂರಿನಲ್ಲಿ ಈ ಬಾರಿಯೂ ಮತದಾನ ಕಡಿಮೆಯಾಗಿದೆ. ಮನೆ ಬಿಟ್ಟು ಬಾರದವರು, ವೀಕೆಂಡ್ ಎಂದು ಊರು ಖಾಲಿ ಮಾಡಿದವರು ಮತಗಟ್ಟೆಯಿಂದ ದೂರ ಉಳಿದಿದ್ದಾರೆ. ಇದಕ್ಕೆ ಸ್ಪಷ್ಟ ನಿದರ್ಶನ ಅಂದ್ರೆ, ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮತಗಟ್ಟೆಗಳಲ್ಲಿ ಪ್ರತಿ ಗಂಟೆಗೆ ಐದು ಜನ ಮಾತ್ರ ಮತದಾನ ಮಾಡಿದ್ದು ಕಂಡು ಬಂತು.

ಯಾವ ಕ್ಷೇತ್ರದಲ್ಲಿ

ಶೇಕಡವಾರು ಮತದಾನ ಎಷ್ಟಾಗಿದೆ?

ಸಂಜೆ 7.30ರವರೆಗಿನ ಮತ ಲೆಕ್ಕಾಚಾರದಲ್ಲಿ ರಾಜ್ಯದ 14 ಕ್ಷೇತ್ರದಲ್ಲಿ ಶೇಕಡಾ 65ರಷ್ಟು ಮತದಾನವಾಗಿದೆ. ಇದರಲ್ಲಿ ಅತಿ ಕಡಿಮೆ ಬೆಂಗಳೂರು ಸೆಂಟ್ರಲ್‌ನಲ್ಲಿ 49 ಪರ್ಸೆಂಟ್ ವೋಟಿಂಗ್ ಆಗಿದೆ. ಬೆಂಗಳೂರು ಉತ್ತರದಲ್ಲಿ 51 ಪರ್ಸೆಂಟ್, ಬೆಂಗಳೂರು ಗ್ರಾಮಾಂತರದಲ್ಲಿ ಶೇಕಡಾ 61ರಷ್ಟು ಮತದಾನವಾಗಿದೆ. ಇನ್ನೂ ಬೆಂಗಳೂರು ದಕ್ಷಿಣದಲ್ಲಿ 49ರಷ್ಟು ವೋಟಿಂಗ್ ಆಗಿದೆ. ಚಾಮರಾಜನಗರದಲ್ಲಿ 69, ಚಿಕ್ಕಬಳ್ಳಾಪುರದಲ್ಲಿ 71, ಚಿತ್ರದುರ್ಗದಲ್ಲಿ 67, ದಕ್ಷಿಣ ಕನ್ನಡದಲ್ಲಿ 72, ಹಾಸನದಲ್ಲಿ 72, ಕೋಲಾರದಲ್ಲಿ 73ರಷ್ಟು ಮತದಾನವಾಗಿದೆ. ಇನ್ನೂ ಮಂಡ್ಯದಲ್ಲಿ ಅತಿ ಹೆಚ್ಚು ಅಂದ್ರೆ, 74.87ರಷ್ಟು ವೋಟಿಂಗ್ ಆಗಿದೆ. ಮೈಸೂರಲ್ಲಿ 66, ತುಮಕೂರು ಮತ್ತು ಚಿಕ್ಕಮಗಳೂರಲ್ಲಿ 72ರಷ್ಟು ಮತದಾನವಾಗಿದೆ.

Leave a Comment