ಉಡುಪಿ: ಕಳೆದೊಂದು ವಾರದ ಹಿಂದೆ ಉಡುಪಿಯ ಪ್ರತಿಷ್ಠಿತ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ವಿದ್ಯಾರ್ಥಿನಿಯರ ಅರೆನಗ್ನ ವೀಡಿಯೋ ಚಿತ್ರೀಕರಣ ಮಾಡಿದ ಮುಸ್ಲಿಂ ವಿದ್ಯಾರ್ಥಿನಿಯರ ಮೇಲೆ ಉಡುಪಿ ಜಿಲ್ಲಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ವೀಡಿಯೋ ಮಾಡಿದ ಮುಸ್ಲಿಂ ಸಮುದಾಯದ ಮೂವರು ವಿದ್ಯಾರ್ಥಿಗಳಾದ ಅಲಿಮತುಲ್ ಶೈಫಾ, ಶಬಾನಾಜ್ ಮತ್ತು ಆಲಿಯಾ ವಿರುದ್ಧ ಹಾಗೂ ನೇತ್ರಜ್ಯೋತಿ ಆಡಳಿತ ಮಂಡಳಿಯ ವಿರುದ್ಧ ಸಾಕ್ಷ್ಯನಾಶ ಆರೋಪದಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಸೆಕ್ಷನ್ 509,
204, 175,34, ಸೇರಿ ವಿವಿಧ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. ಈ ಮೂಲಕ ರಾಜ್ಯಾದ್ಯಂತ ಬಿಜೆಪಿ ನಾಯಕರು, ಹಲವು ಹಿಂದೂ ಸಂಘಟನೆಗಳು, ಮಹಿಳೆಯರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ವಿಚಾರಣೆಯನ್ನು ಆರಂಭಿಸಲಿದ್ದಾರೆ.















