ಚಿಕ್ಕಬಳ್ಳಾಪುರ(ಅ.26): ಸಿಮೆಂಟ್ ಬಲ್ಕರ್ ಲಾರಿ ಟಾಟಾ ಸುಮೋ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ ಹಲವರಿಗೆ ಗಾಯಗಳಾದ ಘಟನೆ ಚಿಕ್ಕಬಳ್ಳಾಪುರ ನಗರದ ಹೊರವಲಯದ ಚಿತ್ರಾವತಿ ಬಳಿ ಇಂದು ನಡೆದಿದೆ. ಟಾಟಾ ಸುಮೋ ಕಾರು ಸಿಮೆಂಟ್ ಬಲ್ಕರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ಎದುರೇ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು
ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.














