ಸಚಿವೆ ಲಕ್ಷ್ಮೀ ಹೆಬ್ಬಾಲ್ಕರ್ ಮಗ ಹಾಗೂ ಅಳಿಯನ ಕೊರಳಲ್ಲಿ ಹುಲಿ ಉಗುರು ಸಾಮಾಜಿಕ ಜಾಲತಾಣದಲ್ಲಿ ವೈರಲ್- ಸೂಕ್ತ ಕಾನೂನು ಕ್ರಮ ಜರಗಿಸಲು ನೆಟ್ಟಿಗರಿಂದ ಆಗ್ರಹ.

Coastal Bulletin
ಸಚಿವೆ ಲಕ್ಷ್ಮೀ ಹೆಬ್ಬಾಲ್ಕರ್ ಮಗ ಹಾಗೂ ಅಳಿಯನ ಕೊರಳಲ್ಲಿ ಹುಲಿ ಉಗುರು ಸಾಮಾಜಿಕ ಜಾಲತಾಣದಲ್ಲಿ ವೈರಲ್- ಸೂಕ್ತ ಕಾನೂನು ಕ್ರಮ ಜರಗಿಸಲು ನೆಟ್ಟಿಗರಿಂದ ಆಗ್ರಹ.

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿ ಹಾಗೂ ಮಗ ಮೃಣಾಲ್ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೊ ವೈರಲ್ ಆಗುತ್ತಿದೆ.

ಸ್ವತಃ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಇನ್ಸ್‌ಟಾಗ್ರಾಂ ಪೇಜ್‌ನಲ್ಲಿ ಹಾಕಿಕೊಂಡಿರುವ ಫೋಟೊಗಳು.  ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ಕನ್ನಡ ಕಿರುತೆರೆ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷರನ್ನು ಅರಣ್ಯಾಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬಳಿಕ ಸೆಲೆಬ್ರಿಟಿಗಳು ರಾಜಕಾರಣಿಗಳು ಸಹ ಧರಿಸಿರುವ ಫೋಟೊ ವೈರಲ್ ಆಗುತ್ತಿವೆ. ಈ ಫೋಟೊಗಳನ್ನು ಅಪ್ಲೋಡ್ ಇವರ ಬಂಧನ ಯಾವಾಗ ನ್ಯಾಯ ಎಲ್ಲರಿಗೊಂದೇ ಹ್ಯಾಷ್ ಟ್ಯಾಗ್ ಬಳಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರವನ್ನು ಪ್ರಶ್ನಿಸುತ್ತಿರುವ ನೆಟ್ಟಿಗರು. 

ರಾಜ್ಯ ಸರ್ಕಾರದ

ಸಚಿವರ ಕುಟುಂಬದವರೇ ಹುಲಿ ಉಂಗುರ ಧರಿಸಿರುವ ಪ್ರಕಣಗಳು ಬೆಳಕಿಗೆ ಬಂದಿರುವುದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ. ಕಾನೂನು ಎಲ್ಲರಿಗೂ ಒಂದೇ ಎಂದಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ. ಇಂದು ಸುದ್ದಿಗೋಷ್ಠಿಯಲ್ಲಿ ವನ್ಯಜೀವಿ ಸಂರಕ್ಷಣೆ ಕಾಯಿದೆ ಬಿಗಿಯಾಗಿದೆ ವನ್ಯಜೀವಿಗಳ ಅಂಗಾಂಗ ವಸ್ತು ಧರಿಸುವುದು ಅಪರಾಧವಾಗಿದೆ. ನಕಲಿ ಹುಲಿ ಉಗುರಿನ ಪೆಂಡೆಂಟ್ ಕೂಡ ಧರಿಸುವುದು ಪ್ರಚೋದನೆ ನೀಡಿದಂತಾಗುತ್ತದೆ ಎಂದಿರುವುದು ಸಚಿವರು.  ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳಕ್ರ್ ಕುಟುಂಬದಲ್ಲೇ ಅಳಿಯ, ಮಗ ಹುಲಿ ಉಗುರು ಧರಿಸಿರುವ ಫೋಟೊಗಳು ವೈರಲ್ ಆಗಿರುವುದು ಸರ್ಕಾರವನ್ನು ಪೇಚಿಗೆ ಸಿಲುಕಿಸಿದಂತಾಗಿದೆ.

Leave a Comment