Coastal Bulletin

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. 

ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಾದ್ಯಂತ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಡಿ.28 ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ

ಬೆಳಗ್ಗೆ 5 ರ ವರೆಗೆ ನೈಟ್ ಕರ್ಫ್ಯೂ ಜಾರಿಗೆ ಆದೇಶಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರವು ಎಲ್ಲಾ ಹೊಸ ವರ್ಷದ ಪಾರ್ಟಿಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಭೆಗಳನ್ನು ನಿಷೇಧಿಸಿದೆ.

Leave a Comment