ಮೈಸೂರು : ಬಿಜೆಪಿ ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾವತಿಯಿಂದ ಗಾಯತ್ರಿ ಪುರಂ ವಾರ್ಡ್ 39 ರ ಬೂತ್ 237 238 239 147 ರ ಮನೆ ಮನೆಗೆ ತೆರಳಿ ಕೇಂದ್ರ ಹಾಗೂ ರಾಜ್ಯದ ಯೋಜನೆ ಮತ್ತು ಸಾಧನೆಯ ಕರಪತ್ರವನ್ನು ಕೊಡುವುದರ ಜೊತೆಗೆ 8000090009 ಸಂಖ್ಯೆಗೆ ಮಿಸ್ ಕಾಲ್ ಕೊಡುವುದರ ಮೂಲಕ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಜಿತ್ ಹೆಗಡೆ ರವರು ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮೈಸೂರಿನ ನಗರ ಯುವ ಮೋರ್ಚಾ ಅಧ್ಯಕ್ಷ ಎಂಜೆ ಕಿರಣ್ ಗೌಡ, ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಡಿ ಲೋಹಿತ್, ಮೈಸೂರು ನಗರ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮನಿರತ್ನಂ, ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಕುಮಾರ್ ಭರತ್
ಉಪಾಧ್ಯಕ್ಷರಾದ ಕಾರ್ತಿಕ್ ಮರಿಯಪ್ಪ, ನಿಶಾಂತ್ ಕಾರ್ಯದರ್ಶಿಗಳಾದ ಪುನೀತ್, ನಗರ ಕಾರ್ಯಕಾರಿಣಿ ಸದಸ್ಯರಾದ ಬ್ರಹ್ಮಚಾರ್, ಕ್ಷೇತ್ರದ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಕ್ಷೇತ್ರದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಧನರಾಜ್ ನವೀನ್ ಶೆಟ್ಟಿ, ಮುಖಂಡರಾದ ಮನೋಜ್, ಭವಾನಿ ಬಾಯಿ, ಚರಣ್ ಸಿಂಗ್, ಮೋಹನ್ ಕುಮಾರ್, ಶ್ರೀನಿವಾಸ್, ಮುಂತಾದವರು ಉಪಸ್ಥಿತರಿದ್ದರು.














