ಬೆಂಗಳೂರು: ರಾಜ್ಯಸಭೆ ಚುನಾವಣೆ ಮತದಾನ ಮುಕ್ತಾಯಗೊಂಡಿದೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಯಿಂದ ಅಖಾಡಕ್ಕೆ ಇಳಿದಿದ್ದ ಓರ್ವ ಅಭ್ಯರ್ಥಿಗೆ ಗೆಲುವಾಗಿದೆ.
ಇನ್ನು ಚುನಾವಣೆಯಲ್ಲಿ ಬಿಜೆಪಿ ಶಾಸಕರಾದ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದರೆ ಮತ್ತೋರ್ವ ಶಾಸಕ ಶಿವರಾಂ ಹೆಬ್ಬಾರ್ ಗೈರಾಗಿದ್ದಾರೆ. ಈ ಮೂಲಕ ನಿರೀಕ್ಷೆಯಂತೆ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಸೋಲಾಗಿದೆ.
ಕರ್ನಾಟಕದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ನಡೆದ ಮತದಾನ ಅಂತ್ಯವಾಗಿದ್ದು, ಒಟ್ಟು 223ರ ಪೈಕಿ 222 ಮತಗಳು ಚಲಾವಣೆಯಾಗಿವೆ. ಇನ್ನು ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಗೈರಾಗುವ ಮೂಲಕ ಪಕ್ಷಕ್ಕೆ ಶಾಕ್ ಕೊಟ್ಟಿದ್ದಾರೆ. ಈ ಮೂಲಕ ಬಿಜೆಪಿ ಶಾಸಕರು ಕಾಂಗ್ರೆಸ್ ನೀಡಿದ ಟಾಸ್ಕ್ ಅನ್ನು ಪೂರೈಸಿದ್ದಾರೆ.
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಮತದಾನದ ಸಮಯ ಮುಕ್ತಾಯವಾಗಿದೆ. ಇಂದು ಬೆಳಗ್ಗೆ 9 ಗಂಟೆಯಿಂದ
ಸಂಜೆ 4 ಗಂಟೆವರೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ನಡೆದಿದ್ದ ಮತದಾನ ಇದೀಗ ಅಂತ್ಯವಾಗಿದ್ದು, ಒಟ್ಟು 223 ಮತಗಳ ಪೈಕಿ 222 ಶಾಸಕಕರು ತಮ್ಮ ಮತದಾನ ಮಾಡಿದ್ದಾರೆ. ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಗೈರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶೇ.99.5ರಷ್ಟು ಮತದಾನವಾಗಿದೆ. ಕಾಂಗ್ರೆಸ್ ಪಕ್ಷದ 135 ಶಾಸಕರು, ಮೂವರು ಪಕ್ಷೇತರ ಶಾಸಕರು, ಬಿಜೆಪಿಯ 65 ಶಾಸಕರು, ಜೆಡಿಎಸ್ನ 19 ಶಾಸಕ ಸಹ ಮತದಾನ ಮಾಡಿದ್ದಾರೆ. ಯಶವಂತಪುರ ಬಿಜೆಪಿ ಎಸ್ಟಿ ಸೋಮಶೇಖರ್ ಸ್ವಪಕ್ಷದ ಅಭ್ಯರ್ಥಿ ಬದಲಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಇನ್ನು ಮತ್ತೋರ್ವ ಶಾಸಕ ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಗೈರಾಗಿದ್ದಾರೆ. ಈ ಮೂಲಕ ಇಬ್ಬರು ಬಿಜೆಪಿ ಶಾಕ್ ಕೊಟ್ಟಿದ್ದಾರೆ.










