ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಅಲ್ಲಗಳೆದ ಸುರ್ಜೇವಾಲ: ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ

Coastal Bulletin
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಅಲ್ಲಗಳೆದ ಸುರ್ಜೇವಾಲ: ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ನಾಳೆಯೇ (ಮೇ 28) ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹೈಕಮಾಂಡ್​​ ನಾಯಕರ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಅವರ ಆಪ್ತ ಶಾಸಕರು ಮತ್ತು ಸಚಿವರುಗಳ ಬಳಿಯೂ ಈ ವಿಷಯವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಚಟುವಟಿಕೆಗಳೂ ಕರ್ನಾಟಕದಲ್ಲಿ ಬಿರುಸುಗೊಂಡಿವೆ. ಆದರೆ ಈ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮಾತ್ರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಅಲ್ಲದೆ ನಾಯಕತ್ವ ಬದಲಾವಣೆ ಮಾಡಲು ಶಾಸಕಾಂಗ ಪಕ್ಷದ ಸಭೆಯನ್ನೇ ಕರೆದಿಲ್ಲವೆಂದು ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ವಿಪಕ್ಷ ನಾಯಕರಾಗಿ ಕೆಲಸ ನಿರ್ವಹಿಸಿದ್ದ ಸಿದ್ದರಾಮಯ್ಯನವರು, 2ನೇ ಬಾರಿಗೆ ಸಿಎಂ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಕೂಡ ಹಲವು ಸಿಎಂಗಳ

ಜೊತೆ ಸಚಿವರಾಗಿ ಕೆಲಸ ಮಾಡಿದ್ದು, ಅವರು ಸಂಘಟನಾ ಚತುರರೂ ಹೌದು ಎಂದು ಸುರ್ಜೇವಾಲ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ

ಮತ್ತೊಂದೆಡೆ ಕರ್ನಾಟಕದಲ್ಲಿನ ಸದ್ಯದ ಬೆಳವಣಿಗೆಗಳ ಬಗ್ಗೆ ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ನಡೆದಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸಭೆಯಲ್ಲಿ ಭಾಗಿಯಾಗಿದ್ದಾರೆ.

Leave a Comment