Coastal Bulletin

ಬೆಂಗಳೂರು: ಕೊರೋನಾ ರೂಪಾಂತರ ಒಮಿಕ್ರೋನ್ ಆತಂಕದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ರೂಪಾಂತರಿ ತಳಿ ಒಮಿಕ್ರೋನ್ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಕೇರಳ ಮತ್ತು ಮಹಾರಾಷ್ಟ್ರ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಮಂಗಳೂರು, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಕಟ್ಟೆಚ್ಚರ

ವಹಿಸಲು ಸೂಚನೆ ನೀಡಲಾಗಿದೆ ಎಂದರು.

ಚೆಕ್ಪೋಸ್ಟ್ ಗಳಲ್ಲಿ ಕಡ್ಡಾಯವಾಗಿ ತಪಾಸಣೆಗೆ ಸೂಚನೆ ನೀಡಲಾಗಿದೆ. ಇನ್ನು ಮುಂದೆ ಸರ್ಕಾರಿ ಕಚೇರಿಗಳು, ಮಾಲ್ ಗಳು,  ಹೋಟೆಲ್ ಸಪ್ಲೈ ಮಾಡುವವರು ಎರಡು ಡೋಸ್ ಲಸಿಕೆ ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಮೆಡಿಕಲ್ ಕಾಲೇಜು ಮತ್ತು ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಹೆಚ್ಚಿಸಲು ಸೂಚಿಸಲಾಗಿದೆ.

Leave a Comment