ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ ನಿಧನ: ಕರ್ನಾಟಕದಲ್ಲಿ ಇಂದು ಸರ್ಕಾರಿ ರಜೆ ಘೋಷಣೆ

Coastal Bulletin
ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ ನಿಧನ: ಕರ್ನಾಟಕದಲ್ಲಿ ಇಂದು ಸರ್ಕಾರಿ ರಜೆ ಘೋಷಣೆ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ (ಇಂದು) ಸರ್ಕಾರಿ ರಜೆ ಘೋಷಣೆ ಮಾಡಿದೆ. ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ದೇಶದ ಮಾಜಿ ಪ್ರಧಾನಮಂತ್ರಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್​​) ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 92 ವರ್ಷದ ಮಾಜಿ ಪ್ರಧಾನಿಯನ್ನು ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲು ಮಾಡಲಾಗಿತ್ತು.

ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ

ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಮೆಚ್ಚುಗೆ ಗಳಿಸಿದ್ದರು. ದೇಶದ ಆರ್ಥಿಕತೆಯಲ್ಲಿ ವ್ಯಾಪಕ ಸುಧಾರಣೆಗಳನ್ನು ತಂದಿದ್ದರು. ಕಾಂಗ್ರೆಸ್​ ನೇತೃತ್ವದಲ್ಲಿ 2004ರಿಂದ 2014ರ ವರೆಗಿನ ಯುಪಿಎ ಸರ್ಕಾರದ ಎರಡು ಅವಧಿಯಲ್ಲಿ ಪ್ರಧಾನ ಮಂತ್ರಿಯಾಗಿದ್ದರು. ಬಳಿಕ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು, ಈ ವರ್ಷದ ಏಪ್ರಿಲ್​​ನಲ್ಲಿ ರಾಜಕೀಯದಿಂದ ನಿವೃತ್ತಿ ಹೊಂದಿದ್ದರು.

Leave a Comment