ಬೆಂಗಳೂರು : ಕನ್ನಡದ ಜನಪ್ರಿಯ ನಿರ್ಮಾಪಕ ವೀರಸ್ವಾಮಿಯವರ ಪತ್ನಿ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ನ ತಾಯಿ ಶ್ರೀಮತಿ ಪಟ್ಟಮ್ಮಾಳ್ ವೀರಸ್ವಾಮಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ
ಇಂದು ಕೊನೆಯುಸಿರೆಳೆದಿದ್ದಾರೆ.ಇವರು ರವಿಚಂದ್ರನ್, ಬಾಲಾಜಿ ಹಾಗೂ ಮೂವರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.














