ಬೆಂಗಳೂರು: ವೇತನ ಭತ್ಯೆ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಮಾ.1ರಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಮುಂದಾಗಿದ್ದು, ಮುಷ್ಕರದ ವೇಳೆ ಉಪವಾಸ, ಧರಣಿ ಸತ್ಯಾಗ್ರಹ ಹಾಗೂ ಘೋಷಣೆ ಕೂಗುವುದನ್ನು ನಿರ್ಬಂಧಿಸಲಾಗಿದೆ.
ನಾಳೆಯಿಂದ 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳ ಸಂಪೂರ್ಣ ಬಂದ್ ಗೆ ಶಿಕ್ಷಕರ ಸಂಘ ಕರೆ ನೀಡಿದೆ. ಎಲ್ಲಾ ಸರ್ಕಾರಿ ಶಾಲೆಗಳನ್ನೂ ಬಂದ್ ಮಾಡುವಂತೆ ಶಿಕ್ಷಕರ ಸಂಘ ಕರೆ ನೀಡಿದೆ.
ಮತ್ತೊಂದೆಡೆ ರಾಜ್ಯ ನೌಕರರ ಮನವೊಲಿಸಲು ಸರ್ಕಾರ ಕಸರತ್ತು ಮಾಡುತ್ತಿದ್ದು, ಇದೀಗ ಸಂಜೆ ಸಿಎಂ ಸೂಚನೆ ಮೇರೆಗೆ ಸಿಎಸ್ ನೇತೃತ್ವದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ.ಇದರ ನಡುವೆ ಸರ್ಕಾರಿ ಶಾಲೆಗಳ ಸಂಪೂರ್ಣ ಬಂದ್ ಗೆ ಶಿಕ್ಷಕರ ಸಂಘ ಕರೆ ನೀಡಿದೆ. ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1 ರಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿಯ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಬಲ ನೀಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನೂ ಬಂದ್ ಮಾಡುವಂತೆ ಶಿಕ್ಷಕರಿಗೆ ಕರೆ ನೀಡಿದೆ.
ಈ ಬಗ್ಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ ಮಾಹಿತಿ
ನೀಡಿದ್ದಾರೆ. ಎಲ್ಲಾ ಶಿಕ್ಷಕರು ಕರ್ತವ್ಯಕ್ಕೆ ಗೈರಾಗಬೇಕು. ವಿದ್ಯಾರ್ಥಿ ವೇತನ, ಬಿಸಿಯೂಟ, ಸ್ಯಾಟ್ಸ್, ಸೇರಿದಂತೆ ಯಾವುದೇ ಆನ್ ಲೈನ್ ಕೆಲಸದಲ್ಲಿ ಭಾಗಿಯಾಗಬಾರದು ಎಂದು ಮನವಿ ಮಾಡಿದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನೂ ಬಂದ್ ಮಾಡುವ ಶಿಕ್ಷಕರಿಗೆ ಕರೆ ನೀಡಲಾಗಿದೆ.
ಮುಷ್ಕರ ಯಶಸ್ವಿಗೊಳಿಸುವ ಸಂಬಂಧ ಸಂಘ ಸೋಮವಾರ ಮಾರ್ಗಸೂಚಿ ಪ್ರಕಟಿಸಿದೆ. ಶಾಂತಿಯುತ ಹೋರಾಟಕ್ಕೆ ಸೂಚನೆ ನೀಡಲಾಗಿದೆ. ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಯಾವುದೇ ಜನಪ್ರತಿನಿಧಿಗಳನ್ನು ಟೀಕಿಸದಂತೆ ತಾಕೀತು ಮಾಡಿದೆ.ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತುರ್ತು ಸೇವೆಗಳ ಸಿಬ್ಬಂದಿ ಕಪ್ಪು ಬಟ್ಟೆ ಧರಿಸಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದೆ. ಉಳಿದಂತೆ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಮುಷ್ಕರದಲ್ಲಿ ಭಾಗವಹಿಸುವಂತೆ ಸೂಚನೆ ನೀಡಿದೆ.
ಇಲಾಖೆಯ ಎಲ್ಲಾ ವೃಂದ ಸಂಘಗಳ ಅಧ್ಯಕ್ಷರು ತಮ್ಮ ಅಧೀನದಲ್ಲಿ ಬರುವ ಉಪ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅನಿರ್ಧಿಷ್ಟ ಅವಧಿಯ ಮುಷ್ಕರ ಯಶಸ್ವಿಗೊಳಿಸುವಂತೆ ಸಂಘ ಸೂಚನೆ ನೀಡಿದೆ. ಮಾ.1ರಿಂದ ಎಲ್ಲಾ ಇಲಾಖೆಗಳ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವಂತೆ ಸಂಘ ತಿಳಿಸಿದೆ.














