Coastal Bulletin

ಬೆಂಗಳೂರು : ರಾಜ್ಯ ಸರ್ಕಾರದ ಹೊಸ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಆಯ್ಕೆಯಾಗಿದ್ದಾರೆ. ಮೇ. 31 ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರವಿಕುಮಾರ್ ನಿವೃತ್ತಿಯಾಗಲಿದ್ದಾರೆ.

ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಈ ತಿಂಗಳ 31 ರಂದು ನಿವೃತ್ತಿ ಹೊಂದಲಿದ್ದು, ಅಂದಿನಿಂದ ವಂದಿತಾ ಶರ್ಮಾ ಅವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

1986 ರಲ್ಲಿ ಐಎಎಸ್ ಅಧಿಕಾರಿಯಾಗಿ

ಆಯ್ಕೆಯಾಗಿದ್ದ ವಂದಿತಾ ಶರ್ಮಾ ಅವರು ಪ್ರಸ್ತುತ ಅಭಿವೃದ್ಧಿ ಆಯುಕ್ತೆ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಮೂಲಕ ರಾಜ್ಯದಲ್ಲಿ ಈ ಹುದ್ದೆ ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.

Leave a Comment