ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್‌ ನೀರು ಹರಿಸಲು CWRC ಆದೇಶ

Coastal Bulletin
ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್‌ ನೀರು ಹರಿಸಲು CWRC ಆದೇಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯು ಮಹತ್ವದ ಆದೇಶ ಹೊರಡಿಸಿದೆ. ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಸಮಿತಿ ಆದೇಶ ಮಾಡಿದೆ.

ವರ್ಚ್ಯುವಲ್ ಮೂಲಕ ಕರ್ನಾಟಕ, ತಮಿಳುನಾಡು (TamilNadu), ಕೇರಳ ಮತ್ತು ಪುದುಚೇರಿ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಹತ್ವದ ಆದೇಶ ಮಾಡಿದೆ. ಪ್ರತಿ ದಿನ 3,500 ಕ್ಯೂಸೆಕ್‌ನಂತೆ 15 ದಿನಗಳಲ್ಲಿ ಒಟ್ಟು 4 ಟಿಎಂಸಿ ನೀರು ಹರಿಸಲು ಸಿಡಬ್ಲ್ಯೂಆರ್‌ಸಿ ಹೇಳಿದೆ. ಆದ್ರೆ ಇದಕ್ಕೆ ಕರ್ನಾಟಕ ಸರ್ಕಾರ (Karnataka Govt) ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತು, ದೆಹಲಿಯಲ್ಲಿ

ಮಾಧ್ಯಮಗಳೊಂದಿಗೆ ಜಲ ಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಮಾತನಾಡಿ, ನಮಗೇ ನೀರಿನ ಕೊರತೆ ಇದೆ, ನಾನು ಸಿಎಂ ಜೊತೆಗೆ ಚರ್ಚಿಸಿ ನಿರ್ಧರಿಸುತ್ತೇನೆ. ನಮ್ಮಲ್ಲೇ ಮಳೆ ಇಲ್ಲ, ವರ್ಷ ಪೂರ್ತಿ ಕುಡಿಯುವ ನೀರು ಬೇಕಾಗಿದೆ. ಈ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೊರೆ ಹೋಗುವ ಬಗ್ಗೆ ಚರ್ಚಿಸಿ ನಿರ್ಧಾರ ಮಾಡ್ತೀವಿ ಎಂದು ತಿಳಿಸಿದ್ದಾರೆ.

Leave a Comment