Coastal Bulletin

ಮೈಸೂರು : ಇಂದು ಮೈಸೂರಿಗೆ ಸಿಎಂ ಬೊಮ್ಮಾಯಿ ಭೇಟಿ ನೀಡಿ, ಮೈಸೂರು ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 10.55ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ತೆರಳುವ ಸಿಎಂ ಬಸವರಾಜ ಬೊಮ್ಮಾಯಿ, ಅಲ್ಲಿಂದ 11.15ಕ್ಕೆ ನಂಜನಗೂಡಿನ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.

ನಂತರ ಶ್ರೀಕಂಠೇಶ್ವರ ದೇವಸ್ಥಾನದ ಮುಂಭಾಗ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದು, ಬಳಿಕ ಮಧ್ಯಾಹ್ನ 3ಕ್ಕೆ ಕಲಾಮಂದಿರದಲ್ಲಿ ನಡೆಯಲಿರುವ ಮೈಸೂರು ಪೇಯಿಂಟ್ಸ್

ಅಂಡ್ ವಾರ್ನಿಷ್ ಲಿ.,ಸಂಸ್ಥೆಯ 75ನೇ ಅಮೃತ ಮಹೋತ್ಸವದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. 

ಸಂಜೆ 4ಕ್ಕೆ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವಿವಿಧ ಕಟ್ಟಡ ಉದ್ಘಾಟನೆ ಮಾಡಲಿದ್ದು, ಸಂಜೆ 5.30ಕ್ಕೆ ಮೈಸೂರಿನಿಂದ ಹೊರಡಲಿದ್ದು, ನಂತರ 6.05ಕ್ಕೆ ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.

Leave a Comment