Coastal Bulletin

ತೀರ್ಥಹಳ್ಳಿ : ಅಡಿಕೆ ಬೆಳೆಗಾರರಿಗೆ ಸಿಎಂ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅದೇನೆಂದರೆ, ಎಲೆಚುಕ್ಕಿ ರೋಗ ಬಾಧಿತ ಅಡಿಕೆ ತೋಟಗಳ ಬೆಳೆಗಾರರಿಗೆ ತಕ್ಷಣದ ನೆರವಾಗಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಲಾಭ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಉಂಟೂರು ಕೈಮರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಲೆನಾಡು ಭಾಗದ ಚಿಕ್ಕಮಗಳೂರು , ಶಿವಮೊಗ್ಗ ಮತ್ತು ಇತರ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅನುದಾನ ಒದಗಿಸಲಾಗುವುದು ಎಂದರು.

ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗ ಹಾಗೂ

ಇತರ ಕೀಟ ರೋಗಗಳ ಬಗ್ಗೆ ಅಧ್ಯಯನ ಮಾಡಲು ಸರ್ಕಾರವು ಸಂಬಂಧಪಟ್ಟ ವಿಶ್ವವಿದ್ಯಾಲಯದಿಂದ ತಜ್ಞರನ್ನು ಕಳುಹಿಸಿದೆ. ಕೇಂದ್ರ ಸರ್ಕಾರ ರಚಿಸಿದ ತಜ್ಞರ ಸಮಿತಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ. ರೋಗಗಳನ್ನು ನಿಯಂತ್ರಿಸಲು ಶಿಲೀಂಧ್ರನಾಶಕಗಳನ್ನು ಸಿಂಪಡಿಸಲಾಗುತ್ತದೆ ಎಂದರು.

Leave a Comment