Coastal Bulletin

ಬೆಳಗಾವಿ : ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಸಾವಿರಾರು ವಕೀಲರು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಒಂದಲ್ಲ ಒಂದು ಕಾರಣಕ್ಕೆ ವಕೀಲರ ಮೇಲೆ ಹಲ್ಲೆ ಮತ್ತು ದೌರ್ಜನ್ಯ ನಡೆಯುತ್ತಿವೆ . ಹಾಗಾಗಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಿದರೆ ವಕೀಲರ ರಕ್ಷಣೆ ಸಾಧ್ಯವಾಗುತ್ತದೆ ಎಂದರು.

ಬೆಳಗಾವಿಯ ಸುವರ್ಣಸೌಧಕ್ಕೆ ಪ್ರವೇಶಿಸಿದಂತೆ ಬ್ಯಾರಿಕೇಡ್ ಗಳನ್ನು ಹಾಕಲಾಗಿತ್ತು. ಆದರೂ ವಕೀಲರು ಬ್ಯಾರಿಕೇಡ್

ಗಳನ್ನು ತೆರವುಗೊಳಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಳಗಾವಿ ಚಲೋ ನಡೆಸಿದ ವಕೀಲರು ತಮಗೆ ರಕ್ಷಣೆ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಅಂಗೀಕರಿಸಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

Leave a Comment