ಬೆಂಗಳೂರು : ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಹೊಸ ಸ್ವರೂಪ ಪ್ರಕಟಿಸಿದ್ದು, ಎಂಸಿಎ ಕೋರ್ಸ್ ಎರಡು ವರ್ಷ ಎಂದು ಸ್ಪಷ್ಟಪಡಿಸಲಾಗಿದ್ದು, ಆದರೆ ಈಗ ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಅನ್ವಯ ಬಿಎಡ್ ನಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ 5 ವರ್ಷ ವಿಸ್ತರಿಸಲು ಮುಂದಾಗಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಹೊಸ ಸ್ವರೂಪ ನೀಡಲಾಗಿದ್ದು, ಇದರ ಜೊತೆಯಲ್ಲೇ ಹಲವು ಕೋರ್ಸ್
ಗಳ ಅವಧಿಯಲ್ಲೂ ಬದಲಾವಣೆ ಆಗಿದೆ. ಎಂಸಿಎ ಕೋರ್ಸ್ ಅವಧಿ 2 ವರ್ಷ, ಬಿಎಡ್ ವ್ಯಾಸಂಗದಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ 5 ವರ್ಷ ವಿಸ್ತರಿಸಲಾಗುವುದೆಂದು ತಿಳಿಸಿದ್ದಾರೆ.














