Coastal Bulletin

ನವದೆಹಲಿ : ಹಲವು ದಿನಗಳಿಂದ ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಮೇ 10 ರಂದು (ಬುಧವಾರ) ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು (ಶನಿವಾರ) ಮತ ಎಣಿಕೆ ನಡೆಯಲಿದೆ. ಬೆಳಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗದ ಸುದ್ದಿಗೋಷ್ಠಿ ನಡೆದಿದ್ದು, ಈ ವೇಳೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ ಮಾಡಿದ್ದಾರೆ.

ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಏಪ್ರಿಲ್‌ 13 ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಅಲ್ಲದೆ, ನಾಮಪತ್ರ ಸಲ್ಲಿಕೆ ಆರಂಭವೂ ಏಪ್ರಿಲ್‌ 13 ರಂದೇ ಆರಂಭವಾಗಲಿದೆ. ಇನ್ನು,

ಏಪ್ರಿಲ್‌ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ.

Leave a Comment