Coastal Bulletin

ಬೆಂಗಳೂರು :ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಗೌರವ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ.

ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರ, ಬ್ಯಾರಿ ಸಂಸ್ಕೃತಿ ಮತ್ತು ಸಮಾಜಸೇವೆ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮೂರು ಮಂದಿ ಗಣ್ಯರನ್ನು ಅಕಾಡೆಮಿಯು 2021ರ ಸಾಲಿನ ಗೌರವ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. ಈ ಗೌರವ ಪ್ರಶಸ್ತಿಯು ರೂ.50000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚಸೇರಿ) ಶಾಲು, ಹಾಋ, ಫಲತಾಂಬೂಲ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ. ಪುರಸ್ಕಾರವು ರೂ.10000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚ ಸೇರಿ) ಶಾಲು, ಹಾರ, ಸ್ಮರಣಿಕೆ ಮತ್ತು ಪುರಸ್ಕಾರ ಪತ್ರಗಳನ್ನು ಒಳಗೊಂಡಿರುತ್ತದೆ. ಕೊರೋನದ ತೀವ್ರತೆ ಸಂಪೂರ್ಣವಾಗಿ ಕಡಿಮೆಯಾದ ಬಳಿಕ ಎಲ್ಲವೂ ಸಹಜ ಸ್ಥಿತಿಗೆ

ಮರಳಿದ ನಂತರ ಸನ್ಮಾನ್ಯ ಮುಖ್ಯಮಂತ್ರಿಗಳ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ದಿನಾಂಕವನ್ನು ನಿಗದಿಪಡಿಸಿಕೊಂಡು, ಇವರೆಲ್ಲರ ಉಪಸ್ಥಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಈ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅಕಾಡೆಮಿಯ ಅಧ್ಯಕ್ಷರಾದ ರಹೀಂ ಉಚ್ಚಿಲ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪದ್ಮಶ್ರೀ ಸೇರಿದಂತೆ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಎಲ್ಲಾ ಪ್ರತಿಷ್ಠಿತ  ಪ್ರಶಸ್ತಿಯನ್ನು ಪಡೆದಿದ್ದರೂ, ಸ್ವತ: ಬ್ಯಾರಿ ಭಾಷಿಕರಾಗಿರುವ ಹರೇಕಳ ಹಾಜಬ್ಬರವರಿಗೆ ಈ ತನಕ ಅಕಾಡೆಮಿಯ ಪ್ರಶಸ್ತಿ ದೊರಕದೇ ಇರುವುದು ವಿಷಾದನೀಯ ಎಂದು ತಿಳಿಸಿದ ರಹೀಂ ಉಚ್ಚಿಲರವರು, ಈ ಬಾರಿಯು ಆ ಕೊರಗನ್ನು ನಿವಾರಿಸಿದ ಸಂತೃಪ್ತಿಯು ನಮಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Leave a Comment