ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನ ಹಿನ್ನೆಲೆಯಲ್ಲಿ ನಾಳೆ (ಅ.30) ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ (Rupsa) ಇಂದು ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್‌ಕುಮಾರ್ ಅಗಲಿಕ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ನಾಳೆ
(ಶನಿವಾರ) ರಜೆ ಘೋಷಿಸಲಾಗಿದೆ ಎಂದು ರುಪ್ಸಾ ಒಕ್ಕೂಟ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮಾಹಿತಿ ನೀಡಿದ್ದಾರೆ. ಆದ್ರೆ, ಸರ್ಕಾರಿ ಶಾಲೆ ರಜೆ ಕುರಿತು ಇನ್ನೂ ಯಾವುದೇ ತೀರ್ಮಾನವಾಗಿಲ್ಲ.














