ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಅರ್ಜಿಗಳ ತೀರ್ಪು ಪ್ರಕಟವಾಗಿದೆ. ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಮಾಡಲಾಗಿತ್ತು. ಪ್ರಕರಣದ ಮರುತನಿಖೆ ಕೋರಿ ಸೌಜನ್ಯ ಪೋಷಕರು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಆರೋಪಿ ಸಂತೋಷ್ ರಾವ್ ಅಕ್ರಮ ಬಂಧನಕ್ಕೆ ಪರಿಹಾರ ಕೋರಿದ್ದ ಅರ್ಜಿ ಕೂಡಾ ವಜಾ ಆಗಿದೆ.
ಮೂರೂ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು ಹೈಕೋರ್ಟ್. ಇದು ಹೈಕೋರ್ಟ್ ವಿಭಾಗೀಯ ಪೀಠದಿಂದ ಇಂದು ತೀರ್ಪು ಪ್ರಕಟವಾಗಿದೆ. ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ ಅವರ ಪೀಠದಿಂದ ಆದೇಶ ಬಂದಿದ್ದು
ಮೂರು ಅರ್ಜಿಗಳನ್ನು ವಜಾಗೊಳಿಸಿದೆ ಹೈಕೋರ್ಟ್.
ಮರು ತನಿಖೆ ಕೋರಿ ಸೌಜನ್ಯ ಪೋಷಕರು ಸಲ್ಲಿಸಿದ್ದ ಅರ್ಜಿ,ಪರಿಹಾರ ಕೋರಿ ಸಂತೋಷ್ ರಾವ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು,ಸಂತೋಷ್ ರಾವ್ ಖುಲಾಸೆಗೊಳಿಸಿದ್ದ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.















