Coastal Bulletin

ಮೈಸೂರು: ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದ ಭೀಕರ ಅಪಘಾತದಲ್ಲಿ ಹತ್ತು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಹಾಗೂ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ನಡೆದಿದೆ.

ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದವರು ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.

ಮೃತ ಹತ್ತು ಜನರು ಬಳ್ಳಾರಿ‌ ತಾಲೂಕಿನ ಸಂಗನಕಲ್ ಗ್ರಾಮದವರು ತಿಳಿದು ಬಂದಿದೆ. ಒಂದೇ ಕುಟುಂಬದ ಸಂದೀಪ್ (23), ಅವರ ತಂದೆ ಕೊಟ್ರೇಶ್(45),ತಾಯಿ ಸುಜಾತಾ(35) ,ಎರಡನೇ ಕುಟುಂಬದ ಮಂಜುನಾಥ (40) ಪತ್ನಿ ಪೂರ್ಣಿಮಾ(30), ಮಕ್ಕಳಾದ ಕಾರ್ತಿಕ್ (11), ಪವನ್ (7) ಮೂರನೇ ಕುಟುಂಬ ತಾಯಿ ಗಾಯತ್ರಿ(30) ಮಗಳು ಶ್ರಾವ್ಯ(3) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಜನಾರ್ದನ ಅವರ ಮಗ ಪುನೀತ್ ಮತ್ತು ಸಂಗನಕಲ್ ಗ್ರಾಮದ ಶಶಿಕುಮಾರ್ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರಿದಿದೆ.

ಅಪಘಾತಕ್ಕೀಡಾದವರು ಮೇ27ರಂದು ಮೂರು ಕುಟುಂಬದವರು ಪ್ರವಾಸಕ್ಕೆ ತೆರಳಿದ್ದು, ಇಂದು(ಮೇ 29) ರಂದು ಭೀಕರ ಅಪಘಾತಕ್ಕೀಡಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಳ್ಳಾರಿಯಿಂದ ಮೈಸೂರಿಗೆ ರೈಲಿನಲ್ಲಿ ತೆರಳಿ, ಅಲ್ಲಿ ವಾಹನ ಬಾಡಿಗೆ ಪಡೆದು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಟಿ.ನರಸೀಪುರ ಮುಖ್ಯ ರಸ್ತೆಯ ಮಾರ್ಗವಾಗಿ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ದೌಡಾಯಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧ ಟಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment