ಪಿಯುಸಿ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ; ಶುಲ್ಕ ವಿನಾಯಿತಿ ನೀಡಿದ ರಾಜ್ಯ ಸರ್ಕಾರ.

Coastal Bulletin
ಪಿಯುಸಿ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ; ಶುಲ್ಕ ವಿನಾಯಿತಿ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು : ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಓದುವ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕಾಲೇಜು ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ರಾಜ್ಯದ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ 2019-20ನೇ ಸಾಲಿನಿಂದ 456 ರೂಪಾಯಿ ಶುಲ್ಕದಿಂದ ವಿನಾಯಿತಿ ನೀಡಿ, ಪ್ರವೇಶ ನೀಡಲು ಆದೇಶಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ಕೇವಲ ಆಯಾ ವರ್ಚಗಳಿಗೆ ಮಾತ್ರ ಸೀಮಿತವಾಗಿ ಶುಲ್ಕದಿಂದ ವಿನಾಯಿತಿ ನೀಡಿ, ಪ್ರಾಂಶುಪಾಲರ ಖಾತೆಗೆಜಮೆ ಮಾಡಲು ಅನುಮತಿ ನೀಡಲಾಗುತ್ತಿತ್ತು.

2022-23ನೇ ಶೈಕ್ಷಣಿಕ ಸಾಲಿನಿಂದ ಶಾಶ್ವತವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ 456 ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಈ ಮೂಲಕ ಇನ್ಮುಂದೆ ಸರ್ಕಾರವೇ ಶುಲ್ಕ ಪಾವತಿ ಮಾಡಲಿದೆ. ಕಾಲೇಜಿನ ಪ್ರಾಂಶುಪಾಲರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುತ್ತದೆ. ಇದರಿಂದ ದಾಖಲಾತಿ ವೇಳೆ ವಿದ್ಯಾರ್ಥಿನಿಯರು ಉಚಿತವಾಗಿ ಕಾಲೇಜಿಗೆ ದಾಖಲಾಗಬಹುದಾಗಿದೆ.

Leave a Comment