ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಮೂರನೇ ವ್ಯಕ್ತಿಯನ್ನು ಬಂಧಿಸಲಾಗಿದೆ. ಈಗಾಗಲೇ ಘಟನೆಗೆ ಸಂಬಂಧಿಸಿ ಝಾಕಿರ್ ಮತ್ತು ಶಫೀಕ್ ಎಂಬ ಇಬ್ಬರನ್ನು ಬಂಧಿಸಲಾಗಿತ್ತು.
ಕೇರಳದ ಕಣ್ಣೂರಿನ ತಲಸೇರಿಯಲ್ಲಿ ಓರ್ವ ವ್ಯಕ್ತಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರವೀಣ್ ಹತ್ಯೆಯಲ್ಲಿ ಭಾಗಿಯಾಗಿರುವ ಅನುಮಾನದ ಮೇಲೆ ವಶಕ್ಕೆ ಪಡೆಯಲಾಗಿದೆ. ಶಂಕಿತ ವ್ಯಕ್ತಿ ತಲಸೇರಿಯಲ್ಲಿ ಚಿಕನ್ ಸೆಂಟರ್ ಅಂಗಡಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಶಂಕಿತ ವ್ಯಕ್ತಿಯನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧಿಸಿ ಈಗಾಗಲೇ ಝಾಕಿರ್ ಮತ್ತು ಶಫೀಕ್ ಎಂಬವರನ್ನು
ಬಂಧಿಸಲಾಗಿದ್ದು, ಕೇರಳ ನಂಟು ಹೊಂದಿರುವ ಬಗ್ಗೆ ವಿಚಾರಣೆ ನಡೆಸಲಾಗಿತ್ತು. ಈವರೆಗೆ ಮೂರು ಜನರ ಬಂಧನವಾದಂತಾಗಿದೆ. ಇನ್ನು ಬಂಧಿತ ಝಾಕಿರ್ ಮತ್ತು ಶಫೀಕ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಹಂತಕರನ್ನು ಪೊಲೀಸ್ ಕಸ್ಟಡಿಗೆ ವಹಿಸಿದೆ. ಇನ್ನು ಹತ್ಯೆ ಪ್ರಕರಣವನ್ನು ಸರಕಾರ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, 20 ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಲಾಗಿದೆ. ಜೊತೆಗೆ ಬೆಳ್ಳಾರೆ ಸಮೀಪದಲ್ಲರುವ ಎಲ್ಲಾ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿ ಶಂಕಿತರ ಚಲನವಲನಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದೆ.
















