ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಿಸಿದೆ.
ಬಂಡೀಪುರದ ಬಳಿ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ , ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ , ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್
ಸೇರಿದಂತೆ ಹಲವು ಗಣ್ಯರು ರಾಹುಲ್ ಗಾಂಧಿಯನ್ನು ಸ್ವಾಗತಿಸಿದರು.
ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ 21 ದಿನ ಸಂಚರಿಸಲಿದೆ. ಯಾತ್ರೆಗೆ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ.













