MRPLನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ

Coastal Bulletin
MRPLನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ

ಮಂಗಳೂರು, : ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ ವೇಳೆ ಸಂಭವಿಸಿದ ಭಾರೀ ಸ್ಫೋಟ - ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಮೃತರನ್ನು ಮುಲ್ಕಿ ಮೂಲದ ಮನೀಶ್‌ ಕರ್ಕಡ (23) ಎಂದು ಗುರುತಿಸಲಾಗಿದೆ. ಅವರು ಅವಘಡ ನಡೆದ ಪ್ರದೇಶದಲ್ಲಿ ಕಣ್ಮರೆಯಾಗಿದ್ದು, ಮನೀಶ್‌ ಕರ್ಕಡ ಅವರು ಅಲ್ಲಿ ಗುತ್ತಿಗೆಯಾಧಾರದಡಿ

ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ ಓರ್ವ ಮೃತಪಟ್ಟಿದ್ದು, ಒಬ್ಬರಿಗೆ ಸುಟ್ಟ ಗಾಯಗಳು ಹಾಗೂ 8 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Leave a Comment