ಬೆಂಗಳೂರು : ನಗರದ ಮಾಗಡಿ ರಸ್ತೆ ಜಂಕ್ಷನ್ ಬಳಿ ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ.
ಮಂಜುನಾಥ್ , ಶಿವರಾಜ್ ಮೃತ ದುರ್ದೈವಿಗಳು. ಮೃತರು ಗೊಲ್ಲರಹಟ್ಟಿಯ ಇಂದಿರಾ ಕಾಲೋನಿ ನಿವಾಸಿಗಳು
ಎಂದು ತಿಳಿದು ಬಂದಿದೆ.
ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.















