ಚಿತ್ರದುರ್ಗ: ಇಂದು ಡಾ. ಪುನೀತ್ ರಾಜ್ಕುಮಾರ್ ಅವರಿಗೆ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಡಾ.ಶಿವಮೂರ್ತಿ ಮುರುಘಾ ಶರಣರಿಂದ ಮರಣೋತ್ತರ ಬಸವಶ್ರೀ ಪ್ರಶಸ್ತಿ ಸ್ವೀಕರಿಸಿದರು.
ಮುರುಘಾ ಶ್ರೀಗಳ ಕೋರಿಕೆಯಂತೆ ಪ್ರಶಸ್ತಿ ಸ್ವೀಕರಿಸಿದ ನಂತರ ಅಶ್ವಿನಿ ಪುನೀತ್ ರಾಜ್ ಕುಮಾರ್ ಮಾತನಾಡಿದ ಅಶ್ವಿನಿ ಪುನೀತ್ ರಾಜ್ಕುಮಾರ್ ಧನ್ಯವಾದ ಅರ್ಪಿಸಿದ್ದಾರೆ.
ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಜೊತೆ ಆಗಮಿಸಿರುವ
ರಾಘವೇಂದ್ರ ರಾಜ್ಕುಮಾರ್ ಅವರ ಪತ್ನಿ ಮಂಗಳ, ಮಾವ ಚಿನ್ನೇಗೌಡ ಮುರುಘಾಮಠಕ್ಕೆ ಆಗಮಿಸಿದ್ದರು. ಜೊತೆಗೆ ಪುನೀತ್ ರಾಜ್ಕುಮಾರ್ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಸಹ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.















