ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಕೊರೊನಾ ಕೇಸ್ ಏರಿಕೆ ಆಗುತ್ತಿದೆ. ಆಕ್ಟೀವ್ ಪ್ರಕರಣಗಳ ಸಂಖ್ಯೆ ಬರೋಬ್ಬರಿ 150ರ ಗಡಿ ದಾಟಿದೆ. ಕೊರೊನಾ ಭೀತಿ, ಡೆಂಗ್ಯೂ ಕಾಟದ ಮಧ್ಯೆ ಮತ್ತೆ ಮಹಾದೇವಪುರ, ಪೂರ್ವ ವಲಯದಲ್ಲಿ ಕೋವಿಡ್ (Covid) ಏರಿಕೆ ಆಗುತ್ತಿದೆ.
ರಾಜ್ಯದಲ್ಲಿ ಕೋವಿಡ್ ಕೇಸ್ ಗಣನೀಯವಾಗಿ ಏರಿಕೆ ಕಂಡಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ಐಎಲ್ ಮತ್ತು ಸಾರಿ ಕೇಸ್‌ಗಳಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಸರ್ಕಾರ ಸೂಚಿಸಿದೆ. ಇನ್ನು ಬೆಂಗಳೂರಿನಲ್ಲಿ ಕೇಸ್ ಏರಿಕೆ ಆಗುತ್ತಿದ್ದು, ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ (BBMP) ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.
ಬೆಂಗಳೂರಿನಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ವು ಐಎಲ್‌ಐ, ಸಾರಿ ಕೇಸ್‌ಗಳು ಇವೆ ಎಂಬ ಮಾಹಿತಿ ಇದೆ. ಬಿಬಿಎಂಪಿಯ ಎಂಟು ವಲಯ ಮಹಾದೇವಪುರ, ಯಲಹಂಕ, ಪೂರ್ವ ವಲಯ, ಪಶ್ಚಿಮ ವಲಯ ಮತ್ತು ಬೆಂಗಳೂರು ದಕ್ಷಿಣದಲ್ಲೂ ಉಸಿರಾಟದ ಸಮಸ್ಯೆ, ಹೃದಯ ಸಂಬಂಧಿ ಮತ್ತು ಬೇರೆ ಬೇರೆ
ಖಾಯಿಲೆಗಳಿಂದ ಬಳಲುತ್ತಿದ್ದಾರೆ. ಅಂತಹವರ ಬಗ್ಗೆ ನಿಗಾವಹಿಸಲು ಪಾಲಿಕೆ ಮುಂದಾಗಿದೆ. ಆದರೆ ಮಹಾದೇವಪುರ ಬೆಂಗಳೂರು ದಕ್ಷಿಣ ವಲಯ ಜೊತೆಗೆ ಪೂರ್ವ ವಲಯದಲ್ಲಿ ಕೇಸ್ ಏರಿಕೆ ಆಗುತ್ತಿದೆ. ಪೂರ್ವ ವಲಯದಲ್ಲಿ 30ರ ಗಡಿ ದಾಟಿದೆ. ಮಹಾದೇವಪುರದಲ್ಲಿ ಆಕ್ಟೀವ್ ಕೇಸ್ 30ರ ಗಡಿ ದಾಟಿದೆ ಜೊತೆಗೆ ದಕ್ಷಿಣ ವಲಯದಲ್ಲೂ ಕೇಸ್ ಏರಿಕೆ ಆಗಿದೆ.
ಇನ್ನೂ ಡೆಂಗ್ಯೂ ಜೊತೆಗೆ ಕೋವಿಡ್ ಕಂಟ್ರೋಲ್ ಮಾಡಲು ಬಿಬಿಎಂಪಿ ಹಲವು ಕ್ರಮ ವಹಿಸುತ್ತಿದೆ. ಐಎಲ್‌ಐ ಮತ್ತು ಸಾರಿ ಕೇಸ್‌ಗಳ ಬಗ್ಗೆ ಎಚ್ಚರಿಕೆ ವಹಿಸುತ್ತಿದೆ.
ಕೋವಿಡ್ ಲಕ್ಷಣಗಳಿದ್ದರೆ ಏನು ಮಾಡಬೇಕು?
* ಐಎಲ್‌ಐ, ಸಾರಿ ರೋಗಲಕ್ಷಣಗಳಿದ್ದರೆ ಟೆಸ್ಟ್ ಮಾಡಿಸಬೇಕು.
* ಆರೋಗ್ಯದಲ್ಲಿ ಏರುಪೇರಾದ್ರೆ ವೈದ್ಯರನ್ನ ಭೇಟಿ ಮಾಡಬೇಕು.
* ಸಭೆ, ಸಮಾರಂಭಗಳಲ್ಲಿ ಕೊರೊನಾ ನಿಯಮಾವಳಿ ಪಾಲಿಸಬೇಕು.
* ಮಾಸ್ಕ್ ಹಾಕಬೇಕು, ಸ್ಯಾನಿಟೈಸೇಷನ್ ಮಾಡಿಕೊಳ್ಳಬೇಕು.
* ಬೇರೆ ಬೇರೆ ಖಾಯಿಲೆಯಿಂದ ಬಳಲುತ್ತಿದ್ದರೆ ಚಿಕಿತ್ಸೆ ಅಗತ್ಯ.















