ಪ್ರಣವ್ ಮೊಹಂತಿ‌ ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ: ಪರಮೇಶ್ವರ್

Coastal Bulletin
ಪ್ರಣವ್ ಮೊಹಂತಿ‌ ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ: ಪರಮೇಶ್ವರ್

ಬೆಂಗಳೂರು: "ಕೇಂದ್ರ ಸರ್ಕಾರದ ಡೆಪ್ಯೂಟೇಷನ್​​​ ಪಟ್ಟಿಯಲ್ಲಿ ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ‌ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ಬಗ್ಗೆ ಬಹಳಷ್ಟು ತಪ್ಪು ಕಲ್ಪನೆಗಳನ್ನು ಹುಟ್ಟುಹಾಕಲಾಗುತ್ತಿದೆ. ಡಿಜಿ ಹಂತದ ಅಧಿಕಾರಿಯನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ಮಾಡಬೇಕು ಎಂದು ಸರ್ಕಾರ ತೀರ್ಮಾನ ಮಾಡಿತು. ಪ್ರಣವ್ ಮೊಹಂತಿ‌ಯವರನ್ನು ನೇಮಿಸಿದ್ದೇವೆ. ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಅವರ ಹೆಸರಿದೆ.‌ ಅವರನ್ನು ಕೇಂದ್ರದ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಪೋಸ್ಟಿಂಗ್‌ಗಳನ್ನು ಮಾಡಲಾಗುತ್ತಿದೆ. ಇದು ಸರಿ ಕಾಣಿಸುವುದಿಲ್ಲ. ಪ್ರಕರಣದಲ್ಲಿ ಸರ್ಕಾರದ ಆಸಕ್ತಿ

ಏನಿದೆ? ಎಸ್‌ಐಟಿ ಯಾಕೆ ರಚಿಸಿದ್ದೆವು?. ಪ್ರಕರಣದಲ್ಲಿ ಸತ್ಯಾಂಶ ಹೊರಬರಬೇಕು ಎಂಬುದಷ್ಟೇ ಸರ್ಕಾರಕ್ಕೆ ಮುಖ್ಯ" ಎಂದು ಹೇಳಿದರು.

ಈ ನಿಟ್ಟಿನಲ್ಲಿ ಎಸ್‌ಐಟಿ ಮಾಡಿದ್ದೇವೆ. ಎಸ್‌ಐಟಿ ತನಿಖೆ ನಡೆಸಿ, ವರದಿ ಸಲ್ಲಿಸಿದ ನಂತರ ಸತ್ಯಾಸತ್ಯತೆ ಹೊರಬರುತ್ತವೆ. ನಮಗೆ ಬೇಕಿರುವುದು ಅಷ್ಟೇ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಯಾರನ್ನು ರಕ್ಷಣೆ ಮಾಡಬೇಕು, ಯಾರನ್ನೋ ಸಿಕ್ಕಿಹಾಕಿಸಬೇಕು ಎಂಬ ಅಜೆಂಡಾ ಸರ್ಕಾರಕ್ಕೆ ಖಂಡಿತವಾಗಿಯೂ ಇಲ್ಲ. ಯಾರೂ ಕೂಡ ಅದನ್ನು ತಪ್ಪು ಭಾವನೆಯಿಂದ ನೋಡಬಾರದು. ಪಾರದರ್ಶಕವಾಗಿ ತನಿಖೆ ಮಾಡಬೇಕು ಎಂದು ಹೇಳಿದ್ದೇವೆ. ಇದು ಸರ್ಕಾರಕ್ಕಿರುವ ಅಜೆಂಡಾ" ಎಂದರು.

Leave a Comment