ಅನಾರೋಗ್ಯದಿಂದ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ನಾಳೆ ಡಿಸ್ಚಾರ್ಜ್ ಸಾಧ್ಯತೆ.

Coastal Bulletin
ಅನಾರೋಗ್ಯದಿಂದ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ನಾಳೆ ಡಿಸ್ಚಾರ್ಜ್ ಸಾಧ್ಯತೆ.

ಬೆಂಗಳೂರು : ಜೆಡಿಎಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು, ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ ಎಂದು ಅಪೊಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಬುಧವಾರ ಮುಂಜಾನೆ 3.45 ವೇಳೆಗೆ ಆಸ್ಪತ್ರೆಗೆ ಬಂದಿದ್ದ ಕುಮಾರಸ್ವಾಮಿ ಅವರಿಗೆ ಸಣ್ಣ ಪ್ರಮಾಣದಲ್ಲಿ ಸ್ಟ್ರೋಕ್‌ ಆಗಿತ್ತು. ಈಗ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ. ಹೆಚ್‌.ಡಿ ಕುಮಾರಸ್ವಾಮಿಯವರ ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿತ್ತು. ಇದರಿಂದಾಗಿ ಎಡಭಾಗಕ್ಕೆ ಮೈಲ್ಡ್ ಸ್ಟ್ರೋಕ್ ಆಗಿತ್ತು. ಆಸ್ಪತ್ರೆಗೆ ಬರುವಾಗ ಅವರ ಮಾತುಗಳು ತೊದಲುತ್ತಿತ್ತು. ತುಂಬಾ ಸುಸ್ತಾದವರಂತೆ

ಕಾಣಿಸಿದ್ದರು. ಅಡ್ಮಿಟ್ ಆದ ಒಂದು ಗಂಟೆಯಲ್ಲೇ ಅವರ ಆರೋಗ್ಯ ಸ್ಥಿರವಾಗಿತ್ತು. ಅವರಿಗೆ ಇನ್ನೂ‌ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ, ಈಗ ಜನರಲ್‌ ವಾರ್ಡ್ ಗೆ ಶಿಫ್ಟ್ ಮಾಡಿದ್ದೇವೆ.ಈಗ ಅವರು ಎಲ್ಲರ ಜೊತೆಯಲ್ಲೂ ಮಾತನಾಡುತ್ತಿದ್ದಾರೆ. ಆರೋಗ್ಯವಾಗಿದ್ದಾರೆ ಯಾವುದೇ ತೊಂದರೆ ಇಲ್ಲ,ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆಯೂ ಇದೆ ಎಂದು ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

Leave a Comment