ಬೆಂಗಳೂರು:2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಅಣ್ಣಾಮಲೈ ಅವರನ್ನು ನೇಮಕ ಮಾಡಲಾಗಿದೆ.
ಧರ್ಮೇಂದ್ರ ಪ್ರಧಾನ್ ಅವರನ್ನು ಉಸ್ತುವಾರಿಯಾಗಿ ಹಾಗೂ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ಬಿಜೆಪಿ ನೇಮಕ ಮಾಡಲಾಗಿದೆ.
ಕೆ.ಅಣ್ಣಾಮಲೈ ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ್ದರು. ಇದರಿಂದ ಅವರಿಗೆ ಕರ್ನಾಟಕದ ಬಗ್ಗೆ ಅರಿವು ಇದೆ ಎನ್ನುವುದು ಬಿಜೆಪಿಯ ಲೆಕ್ಕಾಚಾರವಾಗಿದೆ.