Coastal Bulletin

ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ನೈಋತ್ಯ ಮುಂಗಾರು ಅತಿಚುರುಕಾದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರವರೆಗೂ ಹಲವೆಡೆ ಧಾರಾಕಾರ ಮಳೆಯಾಗಲಿದೆ ಎಂದು ವರದಿಯಾಗಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ

ಇಲಾಖೆ ತಿಳಿಸಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು. ಚಿತ್ರದುರ್ಗ, ಹಾಸನ, ಕೊಡಗು ರಾಮನಗರ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.

Leave a Comment