ಬೆಂಗಳೂರು: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ.
ತೌಫೀಲ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಎನ್ಐಎ ಅಧಿಕಾರಿಗಳು ನಿನ್ನೆ ರಂದು ರಾತ್ರಿ 9.30 ಕ್ಕೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಂಧಿಸಿದ್ದಾರೆ. ಎನ್ಐಎ ಅಧಿಕಾರಿಗಳು ಆರೋಪಿ ಪತ್ತೆಗೆ 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು.
20 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ NIA ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಒಟ್ಟು 20
ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿರುವ ಒಟ್ಟು 1,500 ಪುಟಗಳ ಚಾರ್ಜ್ಶೀಟ್ ಅನ್ನು NIA ಅಧಿಕಾರಿಗಳು ಕೋರ್ಟ್ಗೆ ಸಲ್ಲಿಸಿದ್ದಾರೆ. ಕೊಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.














