ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ನಿಂದಿಸುವ ಮೂಲಕ ಮತಾಂಧ ಶಕ್ತಿಗಳ ಓಲೈಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಬಿಜೆಪಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾದ ಅಧ್ಯಕ್ಷ ಡಿ ಲೋಹಿತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕೀಯ ನೆಲೆಗಾಗಿ ಸಿದ್ದಾಂತಕ್ಕೆ ಬದ್ದರಾಗದೆ ಊಸರವಳ್ಳಿಯಂತೆ ಪಕ್ಷ ಬದಲಿಸಿ ಅಧಿಕಾರ ಅನುಭವಿಸಿರುವ ಸಿದ್ದರಾಮಯ್ಯನಿಗೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ರಾಷ್ಟ್ರಕ್ಕಾಗಿ ಸೇವೆಗಾಗಿ ಸರ್ವಸ್ವ ಸಮರ್ಪಿಸಿರುವ ಸಂಘದ ಸ್ವಯಸೇವಕರ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ತುರ್ತು ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಜನ ಸಾಮಾನ್ಯರ ಸೇವೆಗೆ ಧಾವಿಸಿರುವ ಸಂಘದ ಸದಸ್ಯರ ಗಣವೇಷದ ಸಮವಸ್ತ್ರ ಚಡ್ಡಿಯ ಬಗ್ಗೆ ಅವಹೇಳನ ಮಾಡಿರುವ ಸಿದ್ದರಾಮಯ್ಯ ಮಾನಸಿಕ ಸ್ಥೈರ್ಯ ಕುಗ್ಗಿಸುವ ವ್ಯರ್ಥ ಪ್ರಯತ್ನದಲ್ಲಿ ತೊಡಗಿದ್ದಾರೆ. ಹಲವು ವರ್ಷಗಳಿಂದ ಗಣವೇಶದ ಸಮವಸ್ತ್ರ ಪ್ಯಾಂಟ್ ಆಗಿ ಬದಲಾಗಿರುವ ವಿಚಾರ ಸಿದ್ದರಾಮಯ್ಯಗೆ ಅರಿವಾದಂತಿಲ್ಲ.
ಅಲ್ಪಸಂಖ್ಯಾತರ ಓಲೈಕೆಗೆ ಸಂಘದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದನ್ನು ನಿಲ್ಲಿಸದಿದ್ದರೆ ರಾಜ್ಯದ ಜನರು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯಗೆ ತಕ್ಕ ಉತ್ತರ ನೀಡಲಿದ್ದಾರೆ
ಆಡಳಿತಾವಧಿಯಲ್ಲಿ ಹಿಂದೂಗಳ ಕೊಲೆ ನಡೆದರೂ
ಸುಮ್ಮನಿದ್ದು ಪಿ.ಎಫ್.ಐ., ಎಸ್.ಡಿ.ಪಿ.ಐ. ನಂತಹ ದೇಶ ವಿರೋಧಿ ಸಂಘಟನೆಗಳ ಕಾರ್ಯಕರ್ತರ ಮೇಲಿದ್ದ ಪ್ರಕರಣಗಳನ್ನು ಹಿಂಪಡೆದ ಸಿದ್ದರಾಮಯ್ಯಗೆ ಆರ್‌ಎಸ್‌ಸ್ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ
ಕಾಂಗ್ರೆಸ್ ನಿರಂತರ ಸೋಲಿನಿಂದ ಕಂಗೆಟ್ಟಿರುವ ಹಾಗೂ ಡಿ.ಕೆ.ಶಿವಕುಮಾರ್ ಜೊತೆಗಿನ ಜಗಳದಿಂದ ಮೂಲೆ ಗುಂಪಾಗುವ ಭಯದಿಂದ ಸಿದ್ದರಾಮಯ್ಯ ಹತಾಶೆಗೊಂಡು ಮಾತನಾಡುತ್ತಿದ್ದಾರೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಬಿಜೆಪಿ ಸಿದ್ಧ ಎಂದು ವ್ಯಂಗ್ಯವಾಡಿದ್ದಾರೆ.
ಜನರ ತೆರಿಗೆ ಹಣವನ್ನು ಒಂದು ವರ್ಗದ ಓಲೈಕೆಗಾಗಿ ಬಳಸಿಕೊಂಡು ಅತಿ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿ ಎಂಬ ಕುಖ್ಯಾತಿಗೆ ಪಾತ್ರವಾಗಿರುವ ಸಿದ್ಧರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಆರ್.ಎಸ್.ಎಸ್ ಎಂಬ ಸೇವಾ ಸಂಘಟನೆಯ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿರುವುದು ಅವರ ಬೌದ್ಧಿಕ ದಿವಾಳಿತನದ ಪರಮಾವಧಿ ಎಂದು ಬಿಜೆಪಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾದ ಅಧ್ಯಕ್ಷ ಡಿ ಲೋಹಿತ್ ಟೀಕಿಸಿದ್ದಾರೆ.













