Coastal Bulletin

ಬೆಂಗಳೂರು : ಇಂದಿನಿಂದ (ಮಾರ್ಚ್ 9ರ) ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7.27 ಲಕ್ಷ ಮಂದಿ ವಿದ್ಯಾರ್ಥಿಗಳು ಸಜ್ಜಾಗಿದ್ದಾರೆ. ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಸಚಿವರು ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಪರೀಕ್ಷೆಗೆ ಒಟ್ಟು 7.27 ಲಕ್ಷ ಮಂದಿ ವಿದ್ಯಾರ್ಥಿಗಳು ಸಜ್ಜಾಗಿದ್ದು, ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 5,716 ಕಾಲೇಜುಗಳ ವಿದ್ಯಾರ್ಥಿಗಳಿ ಪರೀಕ್ಷೆ ಎದುರಿಸಲಿದ್ದಾರೆ. 1,109 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ.

ಪರೀಕ್ಷೆಗೆ ಹೊರಡುವ ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು :

1. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೆಗೆದುಕೊಂಡು ಹೋಗುವುದು ಕಡ್ಡಾಯ

2 ಮೊಬೈಲ್‌ ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳಿಗೆ ನಿಷೇಧ

3. ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಗೋಡೆ ಗಡಿಯಾರದ ವ್ಯವಸ್ಥೆ ಮಾಡಲಾಗಿದೆ

4. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್​​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

5. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್​​ನಲ್ಲಿಯೂ ಉಚಿತವಾಗಿ ಪ್ರಯಾಣಿಸಬಹುದು.

6. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶವಿಲ್ಲ.

7. ಉಚಿತ ಬಸ್ ಸೇವೆ

ಪಡೆಯುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸುವುದು ಕಡ್ಡಾಯ

8. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು ಹಾಗೂ ಪೋಷಕರು ಕೋರಿಕೆಯ ಮೇಲೆ ನಿಲುಗಡೆಗೆ ಕ್ರಮ ವಹಿಸಲಾಗಿದೆ.

9. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಮಾರ್ಗದಲ್ಲಿ ಎಲ್ಲ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ

10. ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆಯಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಪರೀಕ್ಷಾ ಕೇಂದ್ರದ 200 ಮೀಟರ್​​ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲ್ಲೂಕು ಜಾಗೃತ ದಳ, 2,373 ವಿಷೇಷ ಜಾಗೃತ ದಳ ನಿಯೋಜನೆ ಮಾಡಲಾಗುತ್ತದೆ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ. ಜೊತೆಗೆ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

"ಮಾರ್ಚ್ 9 ರಿಂದ ರಾಜ್ಯದ 1,109 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆಯಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯಗಳು" ಎಂದು ಸಚಿವ ಬಿಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

Leave a Comment