ಬೆಂಗಳೂರು: ಕೊಂಚ ತಣ್ಣಗಾಗಿದ್ದ ಧರ್ಮ ದಂಗಲ್ ಮತ್ತೆ ಶುರುವಾಗಿದೆ. ದೇವಸ್ಥಾನಗಳಲ್ಲಿ ಸುಪ್ರಭಾತ ಅಭಿಯಾನಕ್ಕೆ ಶ್ರೀರಾಮಸೇನೆ ಕರೆಕೊಟ್ಟಿದೆ.
ಮಸೀದಿಗಳಿಗೆ ಮೈಕ್ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಹಿಂದುತ್ವ ಪರ ಸಂಘಟನೆಗಳು ಕರ್ನಾಟಕದ ವಿವಿಧೆಡೆ ನಡೆಸುತ್ತಿರುವ ಪ್ರತಿಭಟನೆಗಳು ಮತ್ತೊಂದು ಮಜಲಿಗೆ ಮುಟ್ಟಿವೆ.
ಈ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ರಾಜ್ಯದ ಎಲ್ಲಾ ಜಿಲ್ಲೆಗಳ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಅಭಿಯಾನ ನಡೆಸಲಾಗುವುದು. ಪ್ರತಿದಿನ ಬೆಳಿಗ್ಗೆ 5 ಗಂಟೆಗೆ ದೇವರ ಹಾಡುಗಳನ್ನು ಪ್ಲೇ ಮಾಡಲಾಗುವುದು. ಸದ್ಯಕ್ಕೆ ಮಸೀದಿಗಳ ಎದುರು ಯಾವುದೇ ಕಾರ್ಯಕ್ರಮ ನಡೆಸುವುದಿಲ್ಲ. ಒಂದು ವೇಳೆ ಸರ್ಕಾರ ನಮ್ಮ ಒತ್ತಡಕ್ಕೆ ಮಣಿಯದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ.
ಉತ್ತರ
ಪ್ರದೇಶದಲ್ಲಿ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತೆಗೆದುಕೊಂಡ ಕ್ರಮದ ಮಾದರಿಯಲ್ಲಿಯೇ ಇಲ್ಲಿಯೂ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಕೋರ್ಟ್ ಆದೇಶ ಉಲ್ಲಂಘನೆಯಾಗುವುದನ್ನು ತಡೆಯಬೇಕು. ಈ ಬೆಳವಣಿಗೆ ತಡೆಯದಿದ್ದರೆ ಮುಂದಿನ ದಿನಗಳಲ್ಲಿ ಸಮಾಜಕ್ಕೆ ಅಪಾಯ ತಪ್ಪಿದ್ದಲ್ಲ ಎಂದರು.
ಶ್ರೀರಾಮ ಸೇನೆ ರಾಜ್ಯದ ಎಲ್ಲಾ ಮಸೀದಿಗಳಲ್ಲಿ ಅನಧಿಕೃತವಾಗಿ ಆಜಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಡೆಡ್ ಲೈನ್ ಕೊಟ್ಟದೆ ಆದರೆ ಇದನ್ನು ಅನುಸರಿಸುವಲ್ಲಿ ಬಿಜೆಪಿ ಎಡವಿದೆ ಎಂದು ಆರೋಪಿಸಿ ರಾಜ್ಯದ ಮೈಸೂರು,ಕಲಬುರ್ಗಿ,ಚಿಕ್ಕಮಗಳೂರು,ಹುಬ್ಬಳ್ಳಿ, ಬೆಳಗಾವಿ,ಬಾಗಲಕೋಟೆ ಮೊದಲಾದ ಕಡೆ ಶ್ರೀರಾಮ ಸೇನೆ ಭಜನೆ ಮೂಲಕ ಆಜಾನ್ ವಿರುದ್ಧ ತಮ್ಮ ಅಭಿಯಾನ ಶುರುಮಾಡಿದೆ.














