ಮಲ್ಪೆ: ಶುಕ್ರವಾರ ಉದ್ಘಾಟನೆಯಾಗಿದ್ದ ರಾಜ್ಯದ ಮೊಟ್ಟ ಮೊದಲ ತೇಲುವ ಸೇತುವೆ ಉದ್ಘಾಟನೆಯಾದ 24 ಗಂಟೆಗಳ ಅವಧಿಯಲ್ಲೇ ಕಿತ್ತುಕೊಂಡು ಬಂದಿದೆ. ಪರಿಣಾಮ ಇಲ್ಲಿ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ಬಂದ್ ಮಾಡಲಾಗಿದೆ.
ಉಡುಪಿಯ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಆಕರ್ಷಿಸಲು ಇತ್ತೀಚೆಗಷ್ಟೇ ತೇಲುವ ಸೇತುವೆಯನ್ನು ವ್ಯವಸ್ಥೆಗೊಳಿಸಲಾಗಿತ್ತು. ಇದು ಕರ್ನಾಟಕ ರಾಜ್ಯದಲ್ಲೇ ಪ್ರಥಮ ತೇಲುವ ಸೇತುವೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಆದರೀಗ ಈ ತೇಲುವ ಸೇತುವೆ ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಕಿತ್ತುಕೊಂಡು ಬಂದಿದೆ. ಹೀಗಾಗಿ ತೇಲುವ ಸೇತುವೆ
ಬಳಿ ಪ್ರವಾಸಿಗರ ಪ್ರವೇಶ ಬಂದ್ ಮಾಡಲಾಗಿದೆ. ಭಾನುವಾರ ಸಂಜೆಯಿಂದಲೇ ತೇಲುವ ಸೇತುವೆ ಬಂದ್ ಆಗಿದೆ.
ಸೇತುವೆಗೆ ಅಳವಡಿಸಿರುವ ಬ್ಲಾಕ್‌ಗಳು ಚೆಲ್ಲಾಪಿಲ್ಲಿಯಾಗಿದ್ದು, ಇದರ ವಿಡಿಯೋಗಳೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಿರುವಾಗ ನಿರ್ವಹಣೆಯ ದೃಷ್ಟಿಯಿಂದ ತೇಲುವ ಸೇತುವೆ ಕಾರ್ಯ ಸ್ಥಗಿತಗೊಳಿಸಲಾಗಿದೆ ಎಂದು ನಿರ್ವಾಹಕರು ಮಾಹಿತಿ ನೀಡಿದ್ದಾರೆ.














