ಶಿವಮೊಗ್ಗ : ಶಿವಮೊಗ್ಗದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ 11 ಆರೋಪಿಗಳ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಿಸಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನ ಒಳಗಡೆ ಇದ್ದು ಕುಟುಂಬ ಸದಸ್ಯರಿಗೆ ವಿಡಿಯೋ ಕಾಲ್ ಮಾಡಿದ ಪ್ರಕರಣಕ್ಕೆ ವಿಷಯವಾಗಿ ಎಫ್ ಐ ಆರ್ ದಾಖಲಿಸಲಾಗಿದೆ.
ಹರ್ಷ ಹತ್ಯೆ ಆರೋಪಿಗಳಿಗೆ
ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂದು ಆರೋಪ ಕೇಳಿಬರುತ್ತಿತ್ತು.ಅದಾದ ಬಳಿಕ ಹಿಂದೂ ಸಂಘಟನೆಗಳು, ಹಾಗೂ ಬಿಜೆಪಿ ಕಾರ್ಯಕರ್ತರು ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
















