ಬೆಂಗಳೂರು :10 ಮತ್ತು 12ನೇ ತರಗತಿಯ ಖಾಸಗಿ ಅಥವಾ ಪುನರಾವರ್ತಿತ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಒಟ್ಟು 1,152 ವಿದ್ಯಾರ್ಥಿಗಳು ಸಿಬಿಎಸ್ಸಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವಂತೆ ಅಪೆಕ್ಸ್ ಕೋರ್ಟ್ ತೀರ್ಪು ನೀಡಿತ್ತು.
ಈ ಹಿಂದೆ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವಂತೆ ಅಪೆಕ್ಸ್ ಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆ ವಿದ್ಯಾರ್ಥಿಗಳು ಸುಪ್ರೀಂ ಮೊರೆ ಹೋಗಿದ್ದಾರೆ.
ಇದರ ಜೊತೆಗೆ ಸಿಬಿಎಸ್ಸಿ ತಿಳಿಸಿರುವ ಮೌಲ್ಯಮಾಪನ ವಿಧಾನವನ್ನೂ ಪ್ರಶ್ನಿಸಿದ್ದು, ಎಲ್ಲಾ ವಿದ್ಯಾರ್ಥಿಗಳಿಗೂ ಒಂದೆ ಸಮನಾದ ಅಂಕ ನೀಡುವ ನೀತಿ ರೂಪಿಸಬೇಕು. ಜೊತೆಗೆ ಫಲಿತಾಂಶವನ್ನು ಸರಿ ಸಮಯಕ್ಕೆ ಅನುಗುಣವಾಗಿ ಪ್ರಕಟಿಸಬೇಕು ಎಂದು
ಅರ್ಜಿಯಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಕೊರೋನಾದಿಂದ ಖಾಸಗಿ ಅಥವಾ 2ನೇ ಬಾರಿ ಪರೀಕ್ಷೆ ಬರೆಯುವ ವಿಭಾಗದ ಅಭ್ಯರ್ಥಿಗಳಿಗೆ ದೈಹಿಕವಾಗಿ ಪರೀಕ್ಷೆಯನ್ನು ನಡೆಸುವುದು ಸೂಕ್ತವಲ್ಲ, ಇದು ವಿದ್ಯಾರ್ಥಿಗಳಿಗೆ ಕಷ್ಟವಾಗಬಹುದು. ಅಲ್ಲದೆ ಖಾಸಗಿ ವಿಭಾಗದ ಅಥವಾ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ತೃಪ್ತಿ ಇಲ್ಲದಿದ್ದರೆ ನಿಗದಿತ ಅವಧಿಯೊಳಗೆ ತಮ್ಮ ಆಕ್ಷೇಪಣೆ ಸಲ್ಲಿಸಲು ಅವಕಾಶಕ್ಕಾಗಿ ಸಿಬಿಎಸ್ಸಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ.














