ಮಂಗಳೂರು: ಟ್ರೋಲ್ ಪೇಜ್‌ವೊಂದರಲ್ಲಿ ತುಳುನಾಡಿನ ಬಾವುಟವನ್ನು ಚಪ್ಪಲಿಗೆ ಎಡಿಟ್ ಮಾಡಿ ಅವಮಾನಗೊಳಿಸಿದ್ದ ಮತ್ತು ಅಶ್ಲೀಲ ಬರಹ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರ್ಯ ಎನ್.ಕೆ. ಎಂಬವನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬೆಂಗಳೂರು ಶ್ರೀರಾಂಪುರ ಒಂದನೇ ಕ್ರಾಸ್ ನಿವಾಸಿಯಾಗಿದ್ದು2021ರ ಜೂ.6ರಂದು ತುಳುನಾಡಿನ ಬಾವುಟವನ್ನು ಎಡಿಟ್ ಮಾಡಿ ಅಶ್ಲೀಲ ಬರಹಗಳನ್ನು ಹಾಕಿ ತುಳುವರ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾನೆ ಎಂದು ಮಾಜಿ ಮೇಯರ್, ಕಾರ್ಪೊರೇಟರ್ ಶಶಿಧರ್ ಹೆಗ್ಡೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್‌ರನ್ನು ಭೇಟಿ ನೀಡಿ ದೂರು
ನೀಡಿದ್ದರು. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಬರ್ಕೆ ಠಾಣೆ ಇನ್ಸ್ಪೆಕ್ಟರ್ ಹಾರೂನ್ ಅಖೈರ್,ಪೊಲೀಸರಾದ ಪುಷ್ಪರಾಜ್, ಪ್ರಕಾಶ್,ಶರತ್ ಪಾಲ್ಗೊಂಡಿದ್ದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.














