ಮಂಗಳೂರು : ಡೆತ್ ನೋಟ್ ಬರೆದಿಟ್ಟು ತಬಲಾ ಕಲಾವಿದ ಸುರೇಶ್ ವಾಣಿಶ್ರೀ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಿಂಟೋಸ್ ಲೇನ್ ನಿವಾಸಿ 55 ವರ್ಷದ ಸುರೇಶ್ ಮತ್ತು ಪತ್ನಿ ವಾಣಿಶ್ರೀ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕದ್ರಿ ಕಂಬಳ ಬಳಿಯ ಪಿಂಟೋ ಲೇನ್ ರಸ್ತೆಯಲ್ಲಿ ಕಂಡು ಬಂದಿದೆ. ಸುರೇಶ್ ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು ವಾಣಿಶ್ರೀ ಶವ
ಮನೆಯ ಟೆರೇಸಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುರೇಶ್ ತಬಲಾ ಕಲಾವಿದರಾಗಿದ್ದು ಅವರ ಪತ್ನಿ ವಾಣಿ ಖಾಸಗಿ ಕಾಲೇಜುವೊಂದರಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಹಣಕಾಸು ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ.ಕದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.















