ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಮಂಗಳವಾರ) 525 ಮಂದಿಗೆ ಕೊರೋನಾ ಸೋಂಕು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಮಂಗಳವಾರ) 525 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.ಐವರು ಸೋಂಕಿಗೆ ಬಲಿಯಾದರೆ 754 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 81000ಕ್ಕೆ ಏರಿಕೆಯಾಗಿದೆ. 7,032 ಸಕ್ರಿಯ ಪ್ರಕರಣಗಳು.
73010 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 958 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 61993 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 728417 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ















