ಶ್ರೀನಗರ, ಜುಲೈ 23:ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸರು ಇಬ್ಬರು ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರರನ್ನು ಸದೆ ಬಡಿದಿದ್ದಾರೆ.
ಹತ್ಯೆಯಾದವರಲ್ಲಿ ಒಬ್ಬ ಫಯಾಜ್ ವಾರ್ ಎಂದು ಗುರುತಿಸಲಾಗಿದ್ದು, ಈತ ಕಾಶ್ಮೀರದಲ್ಲಿ ನಡೆದಿದ್ದ ಹಲವು ದಾಳಿಯಲ್ಲಿ ಭಾಗಿಯಾಗಿದ್ದ ಮಾತ್ರವಲ್ಲದೆ ಸಾಕಷ್ಟು ನಾಗರೀಕರು ಹಾಗೂ ಭದ್ರತಾಪಡೆಗಳ ಸಿಬ್ಬಂದಿಯನ್ನೂ ಹತ್ಯೆ ಮಾಡಿದ್ದ ಎಂದು ಕಾಶ್ಮೀರದ ಐಜಿಪಿ ಮಾಹಿತಿ ನೀಡಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನ ವಾರ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ
ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.ಭದ್ರತಾ ಪಡೆಗಳು ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ.ಎನ್‌ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.















