Coastal Bulletin

ಉಡುಪಿ : ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದ್ದು ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಗೆ ಶಿಕ್ಷೆ ವಿಧಿಸಲಾಗಿದೆ.ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದಾರೆ.

ಉದ್ಯಮಿ ಭಾಸ್ಕರ್ ಶೆಟ್ಟಿ 2016 ರ ಜುಲೈ 28 ರಂದು ಉಡುಪಿಯ ಇಂದ್ರಾಳಿಯಲ್ಲಿರುವ ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು. ಎಂಟು ದಿನಗಳ ಬಳಿಕ ಮಣಿಪಾಲ ಪೊಲೀಸರು ಅವರ ಪತ್ನಿ ಮತ್ತು ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಭಾಸ್ಕರ್ ಶೆಟ್ಟಿ ಕೊಲೆ ವಿಚಾರ ಬಾಯ್ಬಿಟ್ಟಿದ್ದರು. 

ಆರೋಪಿಗಳು  ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ

ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟಿದ್ದರು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಈ ಕೊಲೆ ಬೆಳಕಿಗೆ ಬಂತು.ಇದೀಗ ಉಡುಪಿ ನ್ಯಾಯಾಲಯ ಆರೋಪಿಗಳನ್ನು ದೋಷಿಗಳು ಎಂದು ಪರಿಗಣಿಸಿ ತೀರ್ಪು ನೀಡಿದೆ.



Leave a Comment