ಉಡುಪಿ: ಇಂದು (ಆಗಸ್ಟ್ 13)ವಲ್ಡ್ ಆರ್ಗನ್ ಡೊನೇಶನ್ ಡೇ ಆಚರಿಸುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಹೇಳಿದ್ದಾರೆ.
'ಇತ್ತೀಚಿಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸಬಹುದು. ಅಂಗಾಂಗ ಕಸಿ ಯಶಸ್ವಿಯಾಗುತ್ತಿದ್ದು ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ. ನಾನು
ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ. ನಿಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಯಾಕೆ ಮಾಡಬಾರದು. ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ' ಎಂದು ಕರೆ ನೀಡಿದರು.













